ರಾಜ್ಯದ 10 ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ

| Published : Jun 04 2024, 09:54 AM IST

kerala rain

ಸಾರಾಂಶ

ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದೆ.

ಬೆಂಗಳೂರು :  ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡಂಬೆಟ್ಟುವಿನಲ್ಲಿ ತೋಟದಲ್ಲಿ ಹುಲ್ಲು ಕೊಯ್ಯಲು ಹೋಗಿದ್ದ ಮೂವರು ಮಹಿಳೆಯರು ಸಿಡಿಲು ಬಡಿದು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗದಗ, ಕೊಪ್ಪಳ, ಚಿಕ್ಕಮಗಳೂರು, ಬಳ್ಳಾರಿ, ತುಮಕೂರು, ಉಡುಪಿ, ಕೊಪ್ಪಳ, ವಿಜಯನಗರ ಜಿಲ್ಲೆಯ ಹಲವೆಡೆ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. 

ಕೆಲ ಚಿಕ್ಕ ಪುಟ್ಟ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಪ್ರಾರಂಭವಾಗಿದೆ. ಮಳೆಯಾಗಿದ್ದರಿಂದ ರೈತರು ಖುಷಿಯಾಗಿದ್ದು, ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮಳೆ ಹಾಗೂ ಬಿರುಗಾಳಿಗೆ ವಿದ್ಯುತ್‌ ಕಂಬ, ಮರಗಳು ಉರುಳಿದ್ದು, ಕೆಲವೆಡೆ ಮನೆಗಳು ಕುಸಿದಿವೆ. ಬಳ್ಳಾರಿ ಜಿಲ್ಲೆಯಲ್ಲಿ 15 ಮನೆಗಳಿಗೆ ಹಾನಿಯಾಗಿದ್ದರೆ, ವಿಜಯನಗರ ಜಿಲ್ಲೆಯಲ್ಲಿ 9 ಮನೆಗಳು ಬಿದ್ದಿವೆ.