ಸಾರಾಂಶ
ಮೂರು ದಿನ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆಯಲ್ಲಿ ಮಂಗಳವಾರ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ಮೂರು ದಿನ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆಯಲ್ಲಿ ಮಂಗಳವಾರ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಯೆಲ್ಲೋ ಅಲರ್ಟ್ ಘೋಷಣೆ
ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ನ.5, 6ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ
ನ.5, 6ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ಎರಡು ದಿನ ಬೆಂಗಳೂರು ಸೇರಿ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
;Resize=(690,390))
)
)

;Resize=(128,128))
;Resize=(128,128))
;Resize=(128,128))
;Resize=(128,128))