ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇಂದು 14 ಜಿಲ್ಲೆಗಳಲ್ಲಿ ಮಳೆ

| Published : Jan 20 2025, 10:46 AM IST

kolkata Rain

ಸಾರಾಂಶ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗದಲ್ಲಿ ಮುಂದಿನ 24 ಗಂಟೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗದಲ್ಲಿ ಮುಂದಿನ 24 ಗಂಟೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಭಾನುವಾರ ಬೆಳಗ್ಗೆಯಿಂದಲೇ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹಗುರ ಹಾಗೂ ತುಂತುರು ಮಳೆಯಾಗುತ್ತಿದೆ. ಸೋಮವಾರವೂ ಮಳೆ ಮುಂದುವರೆಯಲಿದೆ. 

ಮುಖ್ಯವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರಿನಲ್ಲಿ ಮಳೆಯಾಗಲಿದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನ ಮಳೆ ಇರಲಿದೆ. ಉತ್ತರ ಒಳನಾಡು ಜಿಲ್ಲೆಗಳ ಕೆಲ ಕಡೆ ಮೋಡ ಕವಿದ ವಾತಾವರಣ ಹಾಗೂ ಒಣ ಹವೆ ಮುಂದುವರೆಯಲಿದೆ, ಬುಧವಾರ ಮತ್ತು ಗುರುವಾರದಿಂದ ರಾಜ್ಯಾದ್ಯಂತ ಒಣ ಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.