ಸಾರಾಂಶ
ರಾಜ್ಯದಲ್ಲಿ ಮತ್ತೆ ಪೂರ್ವ ಮುಂಗಾರು ಚುರುಕುಗೊಳ್ಳುವ ಲಕ್ಷಣ ಕಂಡು ಬರುತ್ತಿದ್ದು, ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಪೂರ್ವ ಮುಂಗಾರು ಚುರುಕುಗೊಳ್ಳುವ ಲಕ್ಷಣ ಕಂಡು ಬರುತ್ತಿದ್ದು, ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಹೀಗಾಗಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿ ಪೂರ್ವಮುಂಗಾರು ಉತ್ತಮವಾಗಿದ್ದು, ಈಗಾಗಲೇ ವಾಡಿಕೆ ಪ್ರಮಾಣಕ್ಕಿಂತ ಹೆಚ್ಚಿನ ಮಳೆಯಾಗಿದೆ.
ಮೇ 16ರ ವರೆಗೆ ಐದು ದಿನದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಪ್ರಮುಖವಾಗಿ ತುಮಕೂರು, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ, ಮೈಸೂರು ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಬೆಳಗಾವಿ, ಧಾರಾವಾಡ, ಗದಗದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಜತೆಗೆ, ಭಾರೀ ಗಾಳಿಯೂ ಬೀಸಬಹುದಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಕರಾವಳಿಯ ಮೂರು ಜಿಲ್ಲೆಗಳಲ್ಲೂ ಸಾಧಾರಾಣ ಮಳೆ ಇರಲಿದೆ. ಒಟ್ಟಾರೆ ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆಯಿಂದ ಬಿಸಿಲ ಪ್ರಮಾಣ ಕಡಿಮೆಯಾಗಲಿದ್ದು, ಗರಿಷ್ಠ ಉಷ್ಣಾಂಶ ಕೊಂಚ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- ಉತ್ತರ, ದಕ್ಷಿಣ ಒಳನಾಡಲ್ಲಿ ಯೆಲ್ಲೋ ಅಲರ್ಟ್