ಸಾರಾಂಶ
ನಗರದಲ್ಲಿ ಸುರಂಗ ರಸ್ತೆ(ಟನಲ್ ರೋಡ್) ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್‌ಬಾಗ್ ಬಳಿ ಪ್ರವೇಶ-ನಿರ್ಗಮನ ತಾಣ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು : ನಗರದಲ್ಲಿ ಸುರಂಗ ರಸ್ತೆ(ಟನಲ್ ರೋಡ್) ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್‌ಬಾಗ್ ಬಳಿ ಪ್ರವೇಶ-ನಿರ್ಗಮನ ತಾಣ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಅಶೋಕ್ ಅವರು ಸುರಂಗ ರಸ್ತೆ ನಿರ್ಮಾಣ ವಿರೋಧಿಸಿ ಧರಣಿ ಕೂರುವ ಅವಶ್ಯಕತೆಯಿಲ್ಲ
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶೋಕ್ ಅವರು ಸುರಂಗ ರಸ್ತೆ ನಿರ್ಮಾಣ ವಿರೋಧಿಸಿ ಧರಣಿ ಕೂರುವ ಅವಶ್ಯಕತೆಯಿಲ್ಲ. ಏಕೆಂದರೆ ಅವರು ಬೆಂಗಳೂರಿನವರು. ಇಲ್ಲಿಂದ ಏಳೆಂಟು ಬಾರಿ ಜಯಗಳಿಸಿದ್ದಾರೆ. ಅವರಿಗೂ ಜವಾಬ್ದಾರಿಯಿದೆ. ಅವರ ನೇತೃತ್ವದಲ್ಲಿ ರಚಿಸಿದ ಸಮಿತಿಯೇ ಸರ್ಕಾರಕ್ಕೆ ಸಲಹೆ, ನಿರ್ದೇಶನ ನೀಡಲಿ ಎಂದು ತಿಳಿಸಿದರು.
ಟನಲ್ ಯೋಜನೆಯನ್ನು ಅಶೋಕ್ ಅವರೂ ಗಮನಿಸಲಿ
ಟನಲ್ ಯೋಜನೆಯನ್ನು ಅಶೋಕ್ ಅವರೂ ಗಮನಿಸಲಿ. ಬಿಜೆಪಿ ಶಾಸಕ ಅಶ್ವಥ ನಾರಾಯಣ್ ಸೇರಿದಂತೆ ಬೇರೆ ಯಾರ ಹೆಸರನ್ನು ಸೂಚಿಸಿದರೂ ಅವರನ್ನು ಈ ಸಮಿತಿಗೆ ಸೇರ್ಪಡೆ ಮಾಡಲಾಗುವುದು. ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು, ಮಾಡೋಣ. ನಾನು ಶುಕ್ರವಾರ ರಾತ್ರಿ ಲಾಲ್ ಬಾಗ್ ಬಳಿ ತೆರಳಿ ಎಲ್ಲೆಲ್ಲಿ ಟನಲ್ ರಸ್ತೆಗೆ ಪ್ರವೇಶ ಕಲ್ಪಿಸಬಹುದು ಎಂದು ಪರಿಶೀಲನೆ ನಡೆಸಿದ್ದೇನೆ. ಪರ್ಯಾಯ ಮಾರ್ಗಗಳ ಬಗ್ಗೆ ಆಲೋಚನೆ ನಡೆಸುತ್ತಿದ್ದೇನೆ. ಯಾವುದೇ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದರು.
;Resize=(690,390))
)
)
;Resize=(128,128))
;Resize=(128,128))
;Resize=(128,128))