ಪಶುಸಂಗೋಪನೆ ಇಲಾಖೆಯಲ್ಲಿ 700 ಹುದ್ದೆ ನೇಮಕ : ಉದ್ಯೋಗಕಾಂಕ್ಷಿಗಳಿಗೆ ಗುಡ್ ನ್ಯೂಸ್

| N/A | Published : Mar 06 2025, 11:26 AM IST

Insurance for Cow Buffalo Sheep Goat and Camel in Rajasthan

ಸಾರಾಂಶ

ಪಶುಸಂಗೋಪನೆ ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ್ದರೂ ನೇಮಕಾತಿ ಪ್ರಕ್ರಿಯೆ ವಿಳಂಬವಾಗುವ ಹಿನ್ನೆಲೆಯಲ್ಲಿ 360 ಪಶು ವೈದ್ಯಾಧಿಕಾರಿಗಳನ್ನು ಗುತ್ತಿಗೆ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ.

 ವಿಧಾನಪರಿಷತ್‌: ಪಶುಸಂಗೋಪನೆ ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ್ದರೂ ನೇಮಕಾತಿ ಪ್ರಕ್ರಿಯೆ ವಿಳಂಬವಾಗುವ ಹಿನ್ನೆಲೆಯಲ್ಲಿ 360 ಪಶು ವೈದ್ಯಾಧಿಕಾರಿಗಳನ್ನು ಗುತ್ತಿಗೆ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. 

ಮುಂದಿನ ಆರ್ಥಿಕ ವರ್ಷದಲ್ಲಿ ಡಿ ವೃಂದದ 700 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್‌ ತಿಳಿಸಿದರು. ಕಾಂಗ್ರೆಸ್‌ನ ಎಂ. ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 32 ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗಳಿಗೆ ವಿಶೇಷ ನೇಮಕಾತಿ ನಿಯಮದ ಅಡಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಈ ಪೈಕಿ 27 ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ ಎಂದರು. ಪಶುವೈದ್ಯ ಸಂಸ್ಥೆಗಳ ಕಟ್ಟಡಗಳಿಗೆ ಹಂತ ಹಂತವಾಗಿ ಸ್ವಂತ ಜಾಗ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.