ಚಂಡಮಾರುತ ಎಫೆಕ್ಟ್‌: ರಾಜ್ಯದಲ್ಲಿ ತಗ್ಗಿದ ಮಳೆ - 3 ದಿನ ಕರಾವಳಿಯಲ್ಲಿ ಮಾತ್ರ ಮಳೆ

| Published : May 27 2024, 05:06 AM IST

Remal
ಚಂಡಮಾರುತ ಎಫೆಕ್ಟ್‌: ರಾಜ್ಯದಲ್ಲಿ ತಗ್ಗಿದ ಮಳೆ - 3 ದಿನ ಕರಾವಳಿಯಲ್ಲಿ ಮಾತ್ರ ಮಳೆ
Share this Article
  • FB
  • TW
  • Linkdin
  • Email

ಸಾರಾಂಶ

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ.

ಬೆಂಗಳೂರು :  ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ.

ಕಳೆದ ಮೂರು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿತ್ತು. ಇದೀಗ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ರೆಮಲ್‌’ ಚಂಡಮಾರುತ ಮಳೆಯ ಮಾರುತಗಳನ್ನು ಸೆಳೆಯುತ್ತಿರುವುದರಿಂದ ರಾಜ್ಯದಲ್ಲಿ ಮಳೆ ಕ್ಷೀಣಿಸಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ಮುಂದಿನ ಮೂರು ದಿನ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಜೂನ್‌ 1ರಿಂದ ಮತ್ತೆ ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಿರುವ ಹವಾಮಾನ ಇಲಾಖೆಯ ವರದಿ ಪ್ರಕಾರ, ಕಳೆದ 24 ಗಂಟೆಯಲ್ಲಿ ವಿಜಯಪುರದ ಸಿಂದಗಿ ಹಾಗೂ ಬೆಳಗಾವಿಯಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ. ಬೀದರ್‌ನಲ್ಲಿ ಅತಿ ಹೆಚ್ಚು 40.4 ಡಿಗ್ರಿ ಸೆಲ್ಶಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ.