ಸಾರಾಂಶ
ಹಿನ್ನೆಲೆಯಲ್ಲಿ ಕಾವೇರಿ ನದಿ ತೀರ ಸೇರಿದಂತೆ ವಿವಿಧ ಜಿಲ್ಲೆಯ ಕೆಲವು ಕಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಯಮ ಮೀರಿ ಮೋಜು, ಮಸ್ತಿಯಲ್ಲಿ ತೊಡಗಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು : ಹಿನ್ನೆಲೆಯಲ್ಲಿ ಕಾವೇರಿ ನದಿ ತೀರ ಸೇರಿದಂತೆ ವಿವಿಧ ಜಿಲ್ಲೆಯ ಕೆಲವು ಕಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಯಮ ಮೀರಿ ಮೋಜು, ಮಸ್ತಿಯಲ್ಲಿ ತೊಡಗಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಡಿ.31ರ ಬೆಳಗ್ಗೆ 6 ಗಂಟೆಯಿಂದ ಜ.1ರ ರಾತ್ರಿ 8 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಹಿನ್ನೀರು, ಬಲಮುರಿ, ಎಡಮುರಿಗೆ ನಿರ್ಬಂಧ ಹೇರಲಾಗಿದೆ. ಮಳವಳ್ಳಿ ತಾಲೂಕಿನ ಮುತ್ತತ್ತಿ ಅರಣ್ಯ ಪ್ರದೇಶ, ಕಾವೇರಿ ತೀರದಲ್ಲೂ ನಿಷೇಧಾಜ್ಞೆ ಜಾರಿಮಾಡಲಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಕರಿಘಟ್ಟ, ಗಂಜಾಂನ ಸಂಗಮ್, ಗೋಸಾಯಿ ಘಾಟ್ ಹಾಗೂ ಕಾರೇಕುರ ಬಳಿಯ ಕಾವೇರಿ ನದಿ ಸುತ್ತಮುತ್ತಲಿನ ಪ್ರದೇಶಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಆದೇಶಿಸಿದ್ದಾರೆ.
ಇನ್ನೂ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲೂ ಹೊಸ ವರ್ಷಾಚರಣೆಗೆ ನಿಷೇಧ ಹೇರಲಾಗಿದೆ.ಡಿ.31 ಸಂಜೆ 6 ರಿಂದ ಜ.1 ಬೆಳಗ್ಗೆ 7ರವೆರಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಾಧಾರ, ಝರಿ ಫಾಲ್ಸ್, ಹೊನ್ನಮ್ಮನಹಳ್ಳ, ಗಾಳಿ ಕೆರೆ, ಹಿರೇಕೊಳಲೆ ಕೆರೆ, ಎತ್ತಿನಭುಜ, ದೇವರಮನೆ, ಬಲ್ಲಾಳರಾಯನ ದುರ್ಗಾ, ರಾಣಿ ಝರಿ, ಬಂಡಾಜೆ ಫಾಲ್ಸ್, ಕುಡಿಗೆ ಫಾಲ್ಸ್, ಕ್ಯಾತನಮಕ್ಕಿ, ರುದ್ರಪಾದ, ಕೆಮ್ಮಣ್ಣಗುಂಡಿ, ಕಲ್ಲತ್ತಗಿರಿ, ಹೆಬ್ಬೆ ಫಾಲ್ಸ್ ಸೇರಿ ವಿವಿಧೆಡೆ ಡಿ.31ರ ಸಂಜೆ 6 ಗಂಟೆಯಿಂದ ಜನವರಿ1ರ ಬೆಳಗ್ಗೆ 6 ಗಂಟೆವರೆಗೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಬೀಚ್‌ಗೆ ಇತ್ತಿಚೆಗೆ ಕೋಲಾರದಿಂದ ಶಾಲ ಮಕ್ಕಳು ಪ್ರವಾಸಕ್ಕೆ ತರಳಿದ್ದಾಗ ಸಮುದ್ರದಲ್ಲಿ ಮುಳುಗಿ ನಾಲ್ವರು ಮೃತಪಟ್ಟಿದ್ದರು. ಅಂದಿನಿಂದ ಸಾರ್ವಜನಿಕರಿಗೆ ಸಮುದ್ರ ತೀರಕ್ಕೆ ನಿರ್ಬಂಧ ಹೇರಲಾಗಿತ್ತು. ಈ ನಿರ್ಬಂಧ ಹೊಸ ವರ್ಷಾಚರಣೆಗೂ ಮುಂದುವರೆಯಲಿದೆ.