ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ

| N/A | Published : Aug 25 2025, 11:35 AM IST

Anuchet

ಸಾರಾಂಶ

ಧರ್ಮಸ್ಥಳ ಗ್ರಾಮದ ಪ್ರಕರಣದ ತನಿಖೆ ನಡೆಯುವ ಮಧ್ಯೆಯೇ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ(ಎಸ್‌ಐಟಿ) ಸದಸ್ಯ, ಐಪಿಎಸ್ ಅಧಿಕಾರಿ ಎಂ.ಎನ್‌.ಅನುಚೇತ್‌ ಅವರು ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ.

  ಬೆಂಗಳೂರು :  ಧರ್ಮಸ್ಥಳ ಗ್ರಾಮದ ಪ್ರಕರಣದ ತನಿಖೆ ನಡೆಯುವ ಮಧ್ಯೆಯೇ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ(ಎಸ್‌ಐಟಿ) ಸದಸ್ಯ, ಐಪಿಎಸ್ ಅಧಿಕಾರಿ ಎಂ.ಎನ್‌.ಅನುಚೇತ್‌ ಅವರು ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ.

ಅಮೆರಿಕದಲ್ಲಿ(ಯುಎಸ್‌) ಇಂಟೆಲಿಜೆಂಟ್‌ ಟ್ರಾನ್ಸ್‌ಪೋರ್ಟೇಷನ್‌ ಸೊಸೈಟಿ ಆಫ್‌ ಅಮೆರಿಕ ವರ್ಲ್ಡ್‌ ಕಾಂಗ್ರೆಸ್‌-2025ರಲ್ಲಿ ಭಾಗವಹಿಸುವ ಸಂಬಂಧ ಆ.19ರಿಂದ 31ರ ವರೆಗೆ ವೇತನ ಸಹಿತ ರಜೆ ಮಂಜೂರು ಮಾಡುವಂತೆ ಜು.16ರಂದು ರಾಜ್ಯ ಸರ್ಕಾರಕ್ಕೆ ಅವರು ಮನವಿ ಮಾಡಿದ್ದರು. ಅದರಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೂಚನೆ ಮೇರೆಗೆ ಎಂ.ಎನ್‌.ಅನುಚೇತ್‌ ಅವರಿಗೆ ಅಮೆರಿಕ ಪ್ರವಾಸಕ್ಕೆ ತೆರಳಲು ಆ.1ರಂದು ಅನುಮತಿ ನೀಡಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಅದರಂತೆ ಅನುಚೇತ್‌ ಅವರು ಆ.18ರಂದು ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ.

ಧರ್ಮಸ್ಥಳ ಗ್ರಾಮದ ಪ್ರಕರಣ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಕಳೆದ ಜು.20ರಂದು ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಾಲ್ವರು ಐಪಿಎಸ್‌ ಅಧಿಕಾರಿಗಳನ್ನೊಳಗೊಂಡ ಎಸ್ಐಟಿ ರಚಿಸಿತ್ತು.

Read more Articles on