ಬೆಂಗಳೂರು : ಹೈಕೋರ್ಟ್‌ಗೆ ಹೊಸದಾಗಿ ನೇಮಕಗೊಂಡಿರುವ ಆರು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸಮಾರಂಭ

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ನೂತನ ನ್ಯಾಯಮೂರ್ತಿಗಳಾದ ರಾಘವೇಂದ್ರ ಸೀತಾರಾಮ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ಥಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ್‌ ಪ್ರಮೋದ್ ಮತ್ತು ಹೊಂಬೇಗೌಡ ಶಾಂತಿಭೂಷಣ ಅವರಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಪ್ರಮಾಣ ವಚನ ಬೋಧಿಸಿದರು.ಈ ಸಂದಭದಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಉಪಸ್ಥಿತರಿದ್ದರು.

ಕರ್ನಾಟಕ ಹೈಕೋರ್ಟ್‌ ಗೆ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆ

ಕರ್ನಾಟಕ ಹೈಕೋರ್ಟ್‌ ಗೆ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳು ಮಂಜೂರಾಗಿವೆ. ಸದ್ಯ ಮುಖ್ಯ ನ್ಯಾಯಮೂರ್ತಿ ಸೇರಿ ಒಟ್ಟು 48 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಆರು ಹೊಸ ನ್ಯಾಯಮೂರ್ತಿಗಳ ನೇಮಕ ಆಗಿರುವುದರಿಂದ ಹೈಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿದೆ. ಅವರಲ್ಲಿ 11 ಮಂದಿ ಮಹಿಳಾ ನ್ಯಾಯಮೂರ್ತಿಗಳಿದ್ದಾರೆ. ಇನ್ನೂ 8 ನ್ಯಾಯಮೂರ್ತಿಗಳ ಸ್ಥಾನಗಳು ಖಾಲಿಯಿವೆ.