ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್‌ ಶಾ ವಿರುದ್ಧ ಕರ್ನಾಟಕದಲ್ಲೂ ಎಫ್‌ಐಆರ್‌ ದಾಖಲು ಮಾಡಲಾಗುವುದು.

ಬೆಂಗಳೂರು: ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್‌ ಶಾ ವಿರುದ್ಧ ಕರ್ನಾಟಕದಲ್ಲೂ ಎಫ್‌ಐಆರ್‌ ದಾಖಲು ಮಾಡಲಾಗುವುದು. ಈ ಸಂಬಂಧ ಕಾನೂನು ಪ್ರಕ್ರಿಯೆ ಪರಿಶೀಲಿಸಲಾಗುವುದು ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ತಿಳಿಸಿದರು. 

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ. ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವನ ವಿರುದ್ಧ ಎಫ್‌ಐಆರ್ ದಾಖಲಿಸಿ, ಕ್ರಮ ತೆಗೆದುಕೊಳ್ಳುವ ಕುರಿತು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡುವಂತೆ ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ) ಅವರಿಗೆ ಸೂಚಿಸಿದ್ದೇನೆ.

 ಬಿಜೆಪಿ ಮುಖಂಡನ ಹೇಳಿಕೆ ಕರ್ನಲ್ ಖುರೇಷಿ ಅವರಿಗಷ್ಟೇ ಅಲ್ಲ, ಇಡೀ ದೇಶಕ್ಕೆ ಮಾಡಿದ ಅವಮಾನ. ಇಂಥ ಕೀಳು ಮನಸ್ಸು ಯಾರಿಗೂ ಬರಬಾರದು‌ ಎಂದರು.