ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಸೇರಿ ಕಲಾವಿದರಿಗೆ ಮಾಸಾಶನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇನೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.ಸೋಮವಾರ ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು
ಕನಕಗಿರಿ(ಕೊಪ್ಪಳ): ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಸೇರಿ ಕಲಾವಿದರಿಗೆ ಮಾಸಾಶನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇನೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ಕಲಾವಿದರ ಮಾಸಾಶನ ವಿಚಾರಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಮಸ್ಯೆ
ಸೋಮವಾರ ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಾವಿದರ ಮಾಸಾಶನ ವಿಚಾರಕ್ಕೆ ಸಂಬಂಧಿಸಿದಂತೆ ಇಲಾಖೆಯ ತಾಂತ್ರಿಕ ಸಮಸ್ಯೆಯಾಗಿದೆ. ಇನ್ನು ಜೋಗತಿ ಮಂಜಮ್ಮ ಅವರ ಜತೆ ನಮ್ಮ ಅಧಿಕಾರಿಗಳು ಈಗಾಗಲೇ ಮಾತನಾಡಿದ್ದು, ಮಾಸಾಶನ ನೀಡುವುದಾಗಿ ಸ್ಪಂದಿಸಿದ್ದಾರೆ.
ಕೂಡಲೇ ಮಾಸಾಶನ ಬಿಡುಗಡೆಗೆ ಕ್ರಮ
ನಾನೂ ಸಹ ಕೂಡಲೇ ಮಾಸಾಶನ ಬಿಡುಗಡೆಗೆ ಕ್ರಮ ಕೈಗೊಳ್ಳುತ್ತೇನೆ ಎಂದರು.
