ಬೆಂಗಳೂರು : ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಪರಿಸ್ಥಿತಿ ಗಂಭೀರ ಸ್ಥಿತಿಯಲ್ಲೇ ಮುಂದುವರೆದಿದ್ದು, ಭಾನುವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚೆ ನಡೆಸಿದರು.

ಶ್ವಾಸಕೋಶ ಸಂಬಂಧಿ ಸಮಸ್ಯೆ

ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಸುಧಾಕರ್‌ ಅವರಿಗೆ ಯಶವಂತಪುರ ಮಣಿಪಾಲ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡು ಬರದ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್‌ ಸಿಟಿಯ ಕೃಷ್ಣ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಕಿಮ್ಸ್‌ ಆಸ್ಪತ್ರೆ) ದಾಖಲಿಸಲಾಗಿತ್ತು. ಪ್ರಸ್ತುತ ತೀವ್ರ ನಿಗಾ ವ್ಯವಸ್ಥೆಯಲ್ಲಿದ್ದು, ಆರೋಗ್ಯ ಸ್ಥಿತಿ ಗಂಭೀರ ಸ್ಥಿತಿಯಲ್ಲೇ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಸುಧಾಕರ್‌ ಅವರ ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿದರು. ವೈದ್ಯರಿಂದ ಸಚಿವ ಸುಧಾಕರ್ ಅವರ ಚಿಕಿತ್ಸೆ ಮತ್ತು ಪ್ರಸ್ತುತ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡರು. ಶಾಸಕ ರಘುಮೂರ್ತಿ ಅವರು ಕೂಡ ಉಪಸ್ಥಿತರಿದ್ದರು.