ದಸರಾ ಪ್ರಯುಕ್ತ ಬೆಂಗಳೂರು, ಬೆಳಗಾವಿ, ಮೈಸೂರು ನಡುವೆ ವಿಶೇಷ ರೈಲು ಸೇವೆ

| N/A | Published : Sep 05 2025, 07:50 AM IST

Train

ಸಾರಾಂಶ

ಮುಂಬರುವ ದಸರಾ ಹಬ್ಬದಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳ ಸೇವೆ ನೀಡಲಿದೆ.

 ಬೆಂಗಳೂರು :  ಮುಂಬರುವ ದಸರಾ ಹಬ್ಬದಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳ ಸೇವೆ ನೀಡಲಿದೆ.

ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಮೈಸೂರು ಎಕ್ಸ್ ಪ್ರೆಸ್ ವಿಶೇಷ ರೈಲು :

06271 ರೈಲು ಸೆ. 30 ರಂದು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. 06272 ರೈಲು ಅ.1ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 7.45ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಮೈಸೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು:

06273 ರೈಲು ಅ. 2 ರಂದು ಮೈಸೂರಿನಿಂದ ರಾತ್ರಿ 11.45ಕ್ಕೆ ಹೊರಟು, ಅ. 3 ರಂದು ಮಧ್ಯಾಹ್ನ 12.30ಕ್ಕೆ ಬೆಳಗಾವಿ ತಲುಪಲಿದೆ. 06274 ರೈಲು ಅ. 3ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 5ಕ್ಕೆ ಬೆಂಗಳೂರಿನ ಎಸ್ಎಂವಿಟಿ ಟರ್ಮಿನಲ್ ತಲುಪಲಿದೆ. ಇದು ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌:

06275 ರೈಲು ಅ 4ರಂದು ಎಸ್ಎಂವಿಟಿಯಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ. 06276 ರೈಲು ಅ. 5 ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 5ಕ್ಕೆ ಎಸ್ಎಂವಿಟಿ ಟರ್ಮಿನಲ್ ತಲುಪಲಿದೆ. ಈ ರೈಲು ಎರಡೂ ದಿಕ್ಕಿನಲ್ಲಿಯೂ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

Read more Articles on