ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಯಲ್ಲಿ ನನ್ನ ಪಾತ್ರವಿಲ್ಲ. ಈ ಬಗ್ಗೆ ಸಿಐಡಿ ತನಿಖೆ ಆಗಲಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಯಲ್ಲಿ ನನ್ನ ಪಾತ್ರವಿಲ್ಲ. ಈ ಬಗ್ಗೆ ಸಿಐಡಿ ತನಿಖೆ ಆಗಲಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ವೈಯಕ್ತಿಕ ವ್ಯವಹಾರಗಳಿಂದ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಫ್‌ಐಆರ್‌ನಲ್ಲಿ ನನ್ನ ಹೆಸರಿಲ್ಲ ಹಾಗೂ ಸಚಿನ್‌ ಬರೆದಿದ್ದರು ಎನ್ನಲಾದ ಡೆತ್‌ನೋಟ್‌ನಲ್ಲೂ ನನ್ನ ಮೇಲೆ ಆರೋಪವಿಲ್ಲ. ಆದರೂ ಬಿಜೆಪಿ ನಾಯಕರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಹೀಗಾಗಿ ಪ್ರಕರಣವನ್ನು ಸಿಐಡಿ ಅಥವಾ ಬೇರೆ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಖರ್ಗೆ ಹೇಳಿದ್ದಾರೆ.