ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಸಾರಿಗೆ ನೌಕರರ ಆರೋಗ್ಯ ಯೋಜನೆ ವಿಸ್ತರಣೆ : ರಾಮಲಿಂಗಾರೆಡ್ಡಿ

| N/A | Published : Mar 13 2025, 09:50 AM IST

Ramalingareddy
ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಸಾರಿಗೆ ನೌಕರರ ಆರೋಗ್ಯ ಯೋಜನೆ ವಿಸ್ತರಣೆ : ರಾಮಲಿಂಗಾರೆಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ಸದ್ಯ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರಿಗೆ ಕಲ್ಪಿಸಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಯನ್ನು ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ನಿಗಮಗಳಲ್ಲಿ ಹಂತ ಹಂತವಾಗಿ ಜಾರಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ವಿಧಾನ ಪರಿಷತ್‌ : ಸದ್ಯ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರಿಗೆ ಕಲ್ಪಿಸಿರುವ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಯನ್ನು ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ನಿಗಮಗಳಲ್ಲಿ ಹಂತ ಹಂತವಾಗಿ ಜಾರಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬಿಜೆಪಿಯ ಎಸ್‌.ಕೇಶವಪ್ರಸಾದ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಾರಿಗೆ ನೌಕರರು ಪ್ರತಿ ತಿಂಗಳು 660 ರು. ಕಟ್ಟಿದರೆ ಅವರ ತಂದೆ-ತಾಯಿ ಸೇರಿ ಕುಟುಂಬದ ಸದಸ್ಯರು ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ. ರಾಜ್ಯದ 250 ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯಲಿದೆ ಎಂದರು.

ನಷ್ಟದಲ್ಲಿ ನಾಲ್ಕು ನಿಗಮ: ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು ನಷ್ಟದಲ್ಲಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಸಾರಿಗೆ ಉತ್ತಮವಾಗಿದೆ. ಜನರಿಗೆ ಸೇವೆ ನೀಡುವುದೇ ಮೂಲ ಉದ್ದೇಶವಾಗಿದೆ ಎಂದರು.

ಕಳೆದ 5 ವರ್ಷಗಳಲ್ಲಿ ಕೆಎಸ್‌ಆರ್‌ಟಿಸಿ ಒಟ್ಟು 1500.34 ಕೋಟಿ ರು., ಬಿಎಂಟಿಸಿ 1544.62 ಕೋಟಿ ರು., ಕಲ್ಯಾಣ ಕರ್ನಾಟಕ ಸಾರಿಗೆ 777.64 ಕೋಟಿ ರು. ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ 1386.58 ಕೋಟಿ ರು. ನಷ್ಟದಲ್ಲಿದೆ ಎಂದು ಸಚಿವರು ವಿವರಿಸಿದರು.

ಹಿಂದಿನ ಬಿಜೆಪಿ ಸರ್ಕಾರ ಒಂದೂ ಬಸ್‌ ಖರೀದಿಸಿರಲಿಲ್ಲ. ನಮ್ಮ ಸರ್ಕಾರ 5360 ಹೊಸ ಬಸ್‌ಗಳನ್ನು ಖರೀದಿಸಿದೆ. ಹೊಸ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.