ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು

| N/A | Published : May 16 2025, 12:14 PM IST

Forgotten Railway Station of UP

ಸಾರಾಂಶ

ದಕ್ಷಿಣ ಪಶ್ಚಿಮ ವಲಯದ ವ್ಯಾಪ್ತಿಗೆ ಬರುವ ಕರ್ನಾಟಕದಲ್ಲಿ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಎರಡು ಹೊಸ ರೈಲ್ವೆ ಮಾರ್ಗ ನಿರ್ಮಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

 ನವದೆಹಲಿ: ದಕ್ಷಿಣ ಪಶ್ಚಿಮ ವಲಯದ ವ್ಯಾಪ್ತಿಗೆ ಬರುವ ಕರ್ನಾಟಕದಲ್ಲಿ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಎರಡು ಹೊಸ ರೈಲ್ವೆ ಮಾರ್ಗ ನಿರ್ಮಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. 

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ರೈಲ್ವೆ ಮಂಡಳಿ, ಆಲಮಟ್ಟಿ ಮತ್ತು ಯಾದಗಿರಿ ನಡುವಿನ 162 ಕಿ.ಮೀ ಮಾರ್ಗದ ಸಮೀಕ್ಷೆ ನಡೆಸಲು ₹4.04 ಕೋಟಿ ಹಣ ಬಿಡುಗಡೆ ಮಾಡಲಾಗುವುದು. ಅದೇ ರೀತಿ ಚನ್ನಗಿರಿ ಮಾರ್ಗವಾಗಿ ಭದ್ರಾವತಿ ಮತ್ತು ಚಿಕ್ಕಜಾಜೂರು ನಡುವಿನ 73 ಕಿ.ಮೀ ಮಾರ್ಗ ಸಮೀಕ್ಷೆ ₹1.825 ಕೋಟಿ ಹಣ ಬಿಡುಗಡೆಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದೆ.