ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದ ಆರೋಪಿಯಾಗಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಬೆಂಗಳೂರು : ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದ ಆರೋಪಿಯಾಗಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಸೂರಜ್‌ ರೇವಣ್ಣ ಬ್ರಿಗೇಡ್‌ನ ಖಜಾಂಚಿಯಾಗಿದ್ದ 30 ವರ್ಷದ ವ್ಯಕ್ತಿ ಸೂರಜ್‌ ವಿರುದ್ಧ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪ ಮಾಡಿ 2024ರ ಜೂ.25ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. ಬಳಿಕ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಿತ್ತು. ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಸೂರಜ್‌ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಇದೀಗ ‘ಬಿ’ ರಿಪೋರ್ಟ್‌ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದಕ್ಕೂ ಮುನ್ನ ಸೂರಜ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಸೂರಜ್‌ರನ್ನು ಬಂಧಿಸಿದ್ದರು. ಈ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇದೀಗ ಎರಡನೇ ಪ್ರಕರಣದಲ್ಲಿ ‘ಬಿ’ ರಿಪೋರ್ಟ್‌ ಸಲ್ಲಿಸಿದ್ದಾರೆ.