ಸಾರಾಂಶ
ವಡ್ಡರ್ಸೆ ರಘುರಾಮ ಶೆಟ್ಟಿ ನೆನಪಿನಲ್ಲಿ ಕೊಡಮಾಡುವ, 2024ನೇ ಸಾಲಿನ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ- ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ರವಿ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.
ಉಡುಪಿ: ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ನಾಡಿನ ಧೀಮಂತ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ ಶೆಟ್ಟಿ ನೆನಪಿನಲ್ಲಿ ಕೊಡಮಾಡುವ, 2024ನೇ ಸಾಲಿನ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ- ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ರವಿ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭ ಜ.11ರಂದು ಸಂಜೆ 5ಕ್ಕೆ ಬ್ರಹ್ಮಾವರದ ಬಂಟರ ಭವನದಲ್ಲಿ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.