‘ಚಾಮುಂಡೇಶ್ವರಿ ಬಗ್ಗೆ ಬಾನು ತಮ್ಮ ಗೌರವ ಸ್ಪಷ್ಟಪಡಿಸಲಿ’ : ವಿಜಯೇಂದ್ರ

| N/A | Published : Aug 26 2025, 08:27 AM IST

BJP Karnataka Chief Vijayendra Yediyurappa (Photo/ANI)
‘ಚಾಮುಂಡೇಶ್ವರಿ ಬಗ್ಗೆ ಬಾನು ತಮ್ಮ ಗೌರವ ಸ್ಪಷ್ಟಪಡಿಸಲಿ’ : ವಿಜಯೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ದಸರಾ ಆಚರಣೆಯ ಮುಖ್ಯ ಅತಿಥಿಯಾಗಿ ಉದ್ಘಾಟಿಸುವ ಮೊದಲು ಸಾಹಿತಿ ಬಾನು ಮುಷ್ತಾಕ್‌ ಅವರು ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿ ಬಗ್ಗೆ ತಮಗಿರುವ ಗೌರವ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.

 ಬೆಂಗಳೂರು :  ದಸರಾ ಆಚರಣೆಯ ಮುಖ್ಯ ಅತಿಥಿಯಾಗಿ ಉದ್ಘಾಟಿಸುವ ಮೊದಲು ಸಾಹಿತಿ ಬಾನು ಮುಷ್ತಾಕ್‌ ಅವರು ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿ ಬಗ್ಗೆ ತಮಗಿರುವ ಗೌರವ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಬಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ ಬರಹಗಾರ್ತಿ ಮತ್ತು ಅಂತರಾಷ್ಟ್ರೀಯ ಬುಕರ್ ಪ್ರಶಸ್ತಿ ಗೆದ್ದ ಮೊದಲ ಕನ್ನಡ ಲೇಖಕಿಯಾಗಿ, ಕನ್ನಡ ಸಾಹಿತ್ಯಲೋಕಕ್ಕೆ ಅಪಾರ ಹೆಮ್ಮೆ ತಂದಿದ್ದಾರೆ ನಿಜ. ಆದರೆ ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿ ಬಗ್ಗೆ ಅವರು ಕೆಲ ಹೇಳಿಕೆಗಳನ್ನು ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದರು.

ದಸರಾ ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲ, ಬದಲಾಗಿ ಶಾಸ್ತ್ರ ಮತ್ತು ಪುರಾಣಗಳಲ್ಲಿ ಉಲ್ಲೇಖಗೊಂಡಿರುವ ಮತ್ತು ವಿಜಯನಗರ ಸಾಮ್ರಾಜ್ಯ ಮತ್ತು ಮೈಸೂರು ಸಂಸ್ಥಾನದ ಕಾಲದಿಂದಲೂ ವೈಭವದಿಂದ ಆಚರಿಸಲ್ಪಡುವ ಹಿಂದೂ ಧಾರ್ಮಿಕ ಉತ್ಸವವಾಗಿದೆ. ಹೀಗಾಗಿ, ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿ ಬಗ್ಗೆ ತಮಗಿರುವ ಗೌರವ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಬಾನು ಮುಷ್ತಾಕ್ ಜತೆ ದೀಪಾ ಭಾಸ್ತಿ ಅವರಿಗೂ ಬುಕರ್ ಪ್ರಶಸ್ತಿ ಬಂದಿದೆ. ರಾಜ್ಯ ಸರ್ಕಾರ ದೀಪಾರನ್ನು ಕರೆಯಬಹುದಾಗಿತ್ತು. ಸಿದ್ದರಾಮಯ್ಯ ಅವರಿಗೆ ಕೊಡಗಿನ ಬಗ್ಗೆ ಆಸಕ್ತಿ ಕಡಿಮೆಯೇ ಎಂದು ಪ್ರಶ್ನಿಸಿದರು.

Read more Articles on