ಶೆಟ್ಟರ್‌ ಆದೇಶ ನಾವು ಜಾರಿಗೆ ತಂದಿದ್ದೇವೆ: ಸಿಎಂ ಸಿದ್ದರಾಮಯ್ಯ

| N/A | Published : Oct 18 2025, 05:07 AM IST

CM Siddaramaiah
ಶೆಟ್ಟರ್‌ ಆದೇಶ ನಾವು ಜಾರಿಗೆ ತಂದಿದ್ದೇವೆ: ಸಿಎಂ ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರೇ ಆದೇಶ ಹೊರಡಿಸಿದ್ದರು. ಈ ಆದೇಶ ಆರ್‌ಎಸ್‌ಎಸ್‌ಗೂ ಅನ್ವಯವಾಗುತ್ತದೆ. ಅದನ್ನೇ ನಾವು ಈಗ ಜಾರಿಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

  ಮೈಸೂರು :  ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರೇ ಆದೇಶ ಹೊರಡಿಸಿದ್ದರು. ಈ ಆದೇಶ ಆರ್‌ಎಸ್‌ಎಸ್‌ಗೂ ಅನ್ವಯವಾಗುತ್ತದೆ. ಅದನ್ನೇ ನಾವು ಈಗ ಜಾರಿಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ ಕುರಿತು ಪ್ರತಿಕ್ರಿಯಿಸಿ, ಶಾಲಾ ಆವರಣದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ ಸುತ್ತೋಲೆ ಹೊರಡಿಸಿದ್ದರು. ಅದನ್ನೇ ನಾವೀಗ ಜಾರಿಗೊಳಿಸುತ್ತಿದ್ದೇವೆ. ಸರ್ಕಾರದ ಆದೇಶ ಕೇವಲ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಮಾತ್ರವಲ್ಲ, ಎಲ್ಲಾ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೂ ಅನ್ವಯವಾಗುತ್ತದೆ. ಸರ್ಕಾರಿ ಶಾಲೆ, ಆಟದ ಮೈದಾನ, ಸರ್ಕಾರಿ ಸ್ಥಳಗಳು, ಉದ್ಯಾನವನಗಳಲ್ಲಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಎಲ್ಲಾ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ ಎಂದರು.

ಶಾಲಾ ಆವರಣದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ, ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ ಸುತ್ತೋಲೆ ಹೊರಡಿಸಿದ್ದರು.

Read more Articles on