ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ

| N/A | Published : May 08 2025, 10:54 AM IST

fight against bjp jds from booth level dcm dk shivakumar calls rav
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
Share this Article
  • FB
  • TW
  • Linkdin
  • Email

ಸಾರಾಂಶ

ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

 ನವದೆಹಲಿ : ಪಹಲ್ಗಾಂ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸೇನೆ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರ ಹಾಗೂ ಭದ್ರತಾ ಪಡೆಗಳ ಪರ ನಿಲ್ಲುತ್ತೇವೆ ಎಂದು ತಿಳಿಸಿದ್ದಾರೆ.

ಬುಧವಾರ ಇಲ್ಲಿ ಮಾಧ್ಯಮಗಳಿಗೆ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಭಾರತೀಯ ವಾಯುಪಡೆಯ ಆಪರೇಷನ್ ಸಿಂದೂರ ಕಾರ್ಯಚರಣೆಯನ್ನು ಸ್ವಾಗತಿಸುತ್ತೇನೆ. ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕರ ಹೇಡಿತನದ ಕೃತ್ಯಕ್ಕೆ ಆಪರೇಶನ್ ಸಿಂದೂರ ಉತ್ತಮ ಪ್ರತ್ಯುತ್ತರವಾಗಿದೆ ಎಂದು ತಿಳಿಸಿದ್ದಾರೆ.

ಭದ್ರತಾ ಪಡೆಗಳ ಬಗ್ಗೆ ನಮಗೆ ಬಹಳ ಹೆಮ್ಮೆಯಿದೆ. ಅವರು ದೇಶದ ಘನತೆ, ಹಿತಾಸಕ್ತಿಯನ್ನು ಕಾಪಾಡುತ್ತಿದ್ದು, ಅವರಿಗೆ ನಾವೆಲ್ಲರೂ ನಮಿಸೋಣ. ಈ ಸಂದರ್ಭದಲ್ಲಿ ನಾವು ಅವರ ಬೆನ್ನಿಗೆ ನಿಲ್ಲೋಣ. ಕಾಂಗ್ರೆಸ್ ಪಕ್ಷ ದೇಶದ ಹಿತರಕ್ಷಣೆ ವಿಚಾರದಲ್ಲಿ ಸೇನೆ ಬೆನ್ನಿಗೆ ನಿಂತು ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ.

ಉಗ್ರರ ದಾಳಿಗೆ ಪ್ರತಿಕಾರದ ವಿಚಾರದಲ್ಲಿ ನಾವು ಸರ್ಕಾರದ ಪರವಾಗಿ ನಿಂತಿದ್ದೇವೆ. ಬೆಲೆ ಏರಿಕೆ ವಿಚಾರವಾಗಿ ಇಂದು ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಅದನ್ನು ನಾವು ರದ್ದುಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ.