ಸಾರಾಂಶ
ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದವರಿಗೆ ಬಿಜೆಪಿಯಲ್ಲಿ ಯಾವ ಸ್ಥಾನಮಾನವೂ ಇಲ್ಲ. ಕೇವಲ ಯೂಸ್ ಆ್ಯಂಡ್ ಥ್ರೋವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಶಿವಮೊಗ್ಗ : ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದವರಿಗೆ ಬಿಜೆಪಿಯಲ್ಲಿ ಯಾವ ಸ್ಥಾನಮಾನವೂ ಇಲ್ಲ. ಕೇವಲ ಯೂಸ್ ಆ್ಯಂಡ್ ಥ್ರೋವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಶಿವಮೊಗ್ಗದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬೇರೆ ಪಕ್ಷದ ಒಳ ಜಗಳ ಇಟ್ಟುಕೊಂಡು ರಾಜಕಾರಣ ಮಾಡುತ್ತಿಲ್ಲ. ಅವರದು ಯಾವಾಗಲೂ ಇದ್ದದ್ದೆ. ಜನ ಅವರಿಗೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ಕೆಲಸ ಕೊಟ್ಟಿದ್ದಾರೆ. ಅವರಿಗೆ ಅಧಿಕಾರ ಕೊಟ್ಟಾಗ ಆಡಳಿತ ನಡೆಸುವ ಅನುಭವ ಕೂಡ ಇರಲಿಲ್ಲ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದವರಿಗೆ ಬಿಜೆಪಿಯಲ್ಲಿ ಯಾವ ಸ್ಥಾನಮಾನವೂ ಇಲ್ಲ. ಕೇವಲ ಯೂಸ್ ಆ್ಯಂಡ್ ಥ್ರೋ ಮಾಡಿದ್ದಾರೆ. ಇದು ಈಗ ಎಲ್ಲರಿಗೂ ಗೊತ್ತಾಗುತ್ತಿದೆ ಎಂದರು.
ಯೂಸ್ ಆ್ಯಂಡ್ ಥ್ರೋ ಮಾಡಿದವರ ಹೆಸರು ನಮ್ಮ ಬಳಿ ಇದೆ. ಆದರೆ, ಅದನ್ನು ನಾವು ಹೇಳಲು ಹೋಗುವುದಿಲ್ಲ. ರಾಜಕೀಯವಾಗಿ ಒಬ್ಬೊಬ್ಬರು ಒಂದೊಂದು ಸಿದ್ಧಾಂತದ ಮೇಲೆ ಬೆಳೆದಿರುತ್ತಾರೆ. ಅಂತವರು ಬೇರೆ ಕಡೆಗೆ ಹೋದಾಗ ಅಲ್ಲಿನ ಪರಿಸ್ಥಿತಿ ಅವರಿಗೆ ಒಗ್ಗುವುದಿಲ್ಲ. ಅವರ ಪಕ್ಷದಲ್ಲಿ ಏನಾದರೂ ಮಾಡಿಕೊಳ್ಳಲಿ. ನಮಗೆ ಅದರಲ್ಲಿ ಮಧ್ಯ ಪ್ರವೇಶಿಸಲು ಇಷ್ಟವಿಲ್ಲ. ಅದರ ಲಾಭ ಪಡೆಯುವ ಉದ್ದೇಶವೂ ನಮಗಿಲ್ಲ ಎಂದು ಹೇಳಿದರು.