ಸಾರಾಂಶ
ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನಗೆ ಅವಕಾಶ ನೀಡಿದರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ನಾನೇ ಹೋಗುವೆ
ಹೊಸಪೇಟೆ: ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನಗೆ ಅವಕಾಶ ನೀಡಿದರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ನಾನೇ ಹೋಗುವೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಾಕಿಸ್ತಾನ ಯಾವತ್ತಿಗೂ ನಮ್ಮ ಶತ್ರು ದೇಶ.
ಕೇಂದ್ರ ಸರ್ಕಾರ ಪಾಕಿಸ್ತಾನದ ಮೇಲೆ ಯುದ್ಧ ಸಾರಲಿ. ಮೋದಿ, ಅಮಿತ್ ಶಾ ಮತ್ತು ಕೇಂದ್ರ ಸರ್ಕಾರ ನನಗೆ ಅವಕಾಶ ಕೊಡಲಿ, ನಾನು ಯುದ್ಧ ಮಾಡೋದಕ್ಕೆ ಸಿದ್ಧ ಎಂದರು. ಯತ್ನಾಳ್ ಅವರು, ಯಾವಾಗಲೂ ದಮ್ಮು, ತಾಕತ್ತು ಅಂತ ಮಾತಾಡ್ತಾರೆ. ಸಚಿವ ಶಿವಾನಂದ ಪಾಟೀಲ್ ಅವರು ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ದಮ್ಮು, ತಾಕತ್ತು ತೋರಿಸಿದ್ದಾರೆ ಎಂದರು.