ಈ ಬಾರಿ ಕರ್ನಾಟಕಕ್ಕೆ ನೈಋತ್ಯ ಮುಂಗಾರು ನಾಲ್ಕೈದು ದಿನ ಮುಂಚಿತವಾಗಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಜೂ.1ರಂದು ಮುಂಗಾರು ಮಳೆ ಕೇರಳವನ್ನು ಪ್ರವೇಶಿಸುತ್ತದೆ.

ಬೆಂಗಳೂರು: ಈ ಬಾರಿ ಕರ್ನಾಟಕಕ್ಕೆ ನೈಋತ್ಯ ಮುಂಗಾರು ನಾಲ್ಕೈದು ದಿನ ಮುಂಚಿತವಾಗಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಜೂ.1ರಂದು ಮುಂಗಾರು ಮಳೆ ಕೇರಳವನ್ನು ಪ್ರವೇಶಿಸುತ್ತದೆ. 

ಮೇ 26ಕ್ಕೆ ಮುಂಗಾರು ಪ್ರವೇಶಿಸಲಿದೆ

ಈ ಬಾರಿ ಒಂದು ವಾರ ಮುಂಚಿತವಾಗಿ ಅಂದರೆ ಮೇ 26ಕ್ಕೆ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಅಧಿಕೃತ ಮಾಹಿತಿ ನೀಡಿದೆ. ಮೇ 26ಕ್ಕೆ ಮುಂಗಾರು ಕೇರಳ ಪ್ರವೇಶಿಸಿದರೆ, ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ ತಿಂಗಳ ಅಂತ್ಯದಲ್ಲಿ ಮುಂಗಾರು ಆರಂಭವಾಗುತ್ತದೆ. 

ನಾಲ್ಕೈದು ದಿನಗಳಲ್ಲಿ ರಾಜ್ಯವನ್ನು ಮುಂಗಾರು ಪ್ರವೇಶಿಸುತ್ತದೆ

ಕೇರಳದಲ್ಲಿ ಮುಂಗಾರು ಆರಂಭವಾದ ಬಳಿಕ ಗಾಳಿಯ ವೇಗ ಆಧರಿಸಿ ಸುಮಾರು ನಾಲ್ಕೈದು ದಿನಗಳಲ್ಲಿ ರಾಜ್ಯವನ್ನು ಮುಂಗಾರು ಪ್ರವೇಶಿಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದರು.

 ಎಲ್‌ನಿನೋ ಪರಿಣಾಮ ಈ ಬಾರಿ ನೈಋತ್ಯ ಮುಂಗಾರು ವಾಡಿಕೆಗಿಂತ ಶೇ.8ರಷ್ಟು ಕಡಿಮೆ ಇರಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.