ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯದ ಹಿರಿಯ ಸಾಹಿತಿ ನಾ. ಡಿಸೋಜ ವಿಧಿವಶ

| Published : Jan 06 2025, 08:30 AM IST

Na D'Souza

ಸಾರಾಂಶ

ನಾಡಿನ ಹಿರಿಯ ಸಾಹಿತಿ ನಾ.ಡಿಸೋಜ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ 7.50ರ ವೇಳೆಗೆ ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮಂಗಳೂರು : ನಾಡಿನ ಹಿರಿಯ ಸಾಹಿತಿ ನಾ.ಡಿಸೋಜ (87) ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ 7.50ರ ವೇಳೆಗೆ ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ನಾ.ಡಿಸೋಜ ಅವರ ಪುತ್ರಿ ಮಂಗಳೂರಿನಲ್ಲಿದ್ದಾರೆ. ಹೀಗಾಗಿ, ಅವರನ್ನು ಚಿಕಿತ್ಸೆಗಾಗಿ ಇಲ್ಲಿಗೆ ಕರೆದುಕೊಂಡು ಬರಲಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಸೋಮವಾರ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾಗಿದ್ದ ನಾ.ಡಿಸೋಜಾ ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಶರಾವತಿ ಮುಳುಗಡೆ ಪ್ರದೇಶದ ಹಿನ್ನೆಲೆ ಕಥನವಿದ್ದ ಇವರ ‘ದ್ವೀಪ’ ಕಾದಂಬರಿ ಸಿನಿಮಾ ಆಗಿತ್ತು. ಮಂಗಳೂರಿನ ಸಂದೇಶ ಪ್ರತಿಷ್ಠಾನ ಪ್ರತಿವರ್ಷ ಕೊಡ ಮಾಡುವ ಸಾಧಕರ ಪ್ರಶಸ್ತಿಯ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಅವರು ಕಾರ್ಯ ನಿರ್ವಹಿಸಿದ್ದರು. ಮೂರು ವರ್ಷಗಳ ಹಿಂದಷ್ಟೇ ಅನಾರೋಗ್ಯದ ಕಾರಣದಿಂದಾಗಿ ಆ ಜವಾಬ್ದಾರಿಯಿಂದ ನಿವೃತ್ತಿ ಪಡೆದುಕೊಂಡಿದ್ದರು