ಮತಗಳ್ಳತನ ವಿರೋಧಿಸಿ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸೋಣ

| Published : Aug 05 2025, 12:30 AM IST

ಮತಗಳ್ಳತನ ವಿರೋಧಿಸಿ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸೋಣ
Share this Article
  • FB
  • TW
  • Linkdin
  • Email

ಸಾರಾಂಶ

2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ, ರಾಜಾಜಿನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಅಳವಡೆ ದೊಡ್ಡಮಟ್ಟದಲ್ಲಿ ಮತಗಳ ದುರ್ಬಳಿಕೆ ಆಗಿದೆ.

ಕನ್ನಡಪ್ರಭ ವಾರ್ತೆ ಮೈಸೂರುಚುನಾವಣೆ ಆಯೋಗದ ಮತಗಳ್ಳತನ ವಿರೋಧಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸೋಣ ಎಂದು ಇಂದಿರಾಗಾಂಧಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಮಂಚೇಗೌಡನಕೊಪ್ಪಲು ಮನವಿ ಮಾಡಿದ್ದಾರೆ.ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆ ಒಂದು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ಕೇಂದ್ರ ಚುನಾವಣೆ ಆಯೋಗವನ್ನು ದುರ್ಬಳಿಕೆ ಮಾಡಿಕೊಂಡಿರುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಮ್ಮ ಮತ ನಮ್ಮ ಅಧಿಕಾರ ಸಂವಿಧಾನ ಉಳಿಸಿ- ಸಂವಿಧಾನ ರಕ್ಷಿಸಿ ಎಂಬ ಶೀರ್ಷಿಕೆಯಡಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದರು.2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ, ರಾಜಾಜಿನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಅಳವಡೆ ದೊಡ್ಡಮಟ್ಟದಲ್ಲಿ ಮತಗಳ ದುರ್ಬಳಿಕೆ ಆಗಿದೆ. ಇದೇ ವರ್ಷ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಯಲ್ಲೂ ಅಕ್ರಮದ ಅನುಮಾನಗಳು ಗೋಚರಿಸುತ್ತಿವೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕರ್ನಾಟಕದಿಂದ ದೊಡ್ಡ ಮಟ್ಟದ ಹೋರಾಟ ಪ್ರಾರಂಭಿಸುವ ಮೂಲಕ ಚುನಾವಣಾ ಆಯೋಗಕ್ಕೆ ಎಚ್ಚರಿಕೆ ನೀಡಲಿದ್ದಾರೆ. ಆ. 5ರ ಹೋರಾಟದಲ್ಲಿ ಮತಗಳ್ಳತನ ಬಗ್ಗೆ ದಾಖಲೆ ಬಿಡುಗಡೆಗೊಳಿಸಲಿದ್ದು, ನಂತರ ಚುನಾವಣೆ ಆಯೋಗದ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸುವುದು ಎಂದು ತಿಳಿಸಿದರು.ಈ ಬೃಹತ್ ಹೋರಾಟಕ್ಕೆ ನಮ್ಮ ಮೈಸೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವ ಮೂಲಕ ಹೋರಾಟ ಬೆಂಬಲಿಸೋಣ ಎಂದು ಅವರು ಹೇಳಿದರು.