ಸಾರಾಂಶ
ನೀರಬೂದಿಹಾಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್)ಗೆ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೈ. ಕುಂದರಗಿ ಭೇಟಿ ನೀಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪರಿಹಾರ ಬೋಧನೆ ತರಗತಿಗಳನ್ನು ವೀಕ್ಷಿಸಿದರು.
ಕನ್ನಡಪ್ರಭ ವಾರ್ತೆ ಬಾದಾಮಿ
ತಾಲೂಕಿನ ನೀರಬೂದಿಹಾಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ(ಕೆ.ಪಿ.ಎಸ್)ಗೆ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೈ. ಕುಂದರಗಿ ಭೇಟಿ ನೀಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪರಿಹಾರ ಬೋಧನೆ ತರಗತಿಗಳನ್ನು ವೀಕ್ಷಿಸಿದರು.ಪ್ರತಿ ವಿದ್ಯಾರ್ಥಿಯ ವಿಷಯದ ಬಗ್ಗೆ ಕೇಳಿ ಮಾಹಿತಿ ಪಡೆದ ಅವರು, ಶಿಕ್ಷಕರು ಸಿದ್ಧಪಡಿಸಿದ ಕ್ರಿಯಾಯೋಜನೆ ವೇಳಾಪತ್ರಿಕೆ ಪಾಸಿಂಗ್ ಪ್ಯಾಕೇಜ್ ಪ್ರಶ್ನೆ, ಭಂಡಾರ ಪ್ರತಿ ವಿಷಯವಾರು ಕಡತ ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗುವುದು ಹೇಗೆ ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಬಳಿಕ ಶಿಕ್ಷಕರೊಂದಿಗೆ ಸಭೆ ನಡೆಸಿ ಎಸ್ಸೆಸ್ಸೆಲ್ಸಿಯ ಎರಡನೇ ಪರೀಕ್ಷೆ ಹಾಗೂ ಮುಂದಿನ ಶೈಕ್ಷಣಿಕ ವರ್ಷದ ಪೂರ್ವ ತಯಾರಿಯನ್ನು ಕ್ರಿಯಾಯೋಜನೆ ಸಿದ್ಧಪಡಿಸಿಟ್ಟುಕೊಳ್ಳಲು ಸೂಚನೆ ನೀಡಿದರು. ಉಪಪ್ರಾಚಾರ್ಯ ನಾಗರಾಜ ದೇಶಪಾಂಡೆ, ಸಹಶಿಕ್ಷಕರು, ಎಸ್.ಡಿ.ಎಂ.ಸಿ. ಅಧ್ಯಕ್ಷ ಆನಂದ ರಾವ್ ದೇಸಾಯಿ ಉಪಸ್ಥಿತರಿದ್ದರು.