ಸಾರಾಂಶ
ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಭಗತ್‌ಸಿಂಗ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರಾತ್ಯಕ್ಷಿಕೆ ಸಿದ್ಧಪಡಿಸಿದ್ದ ಸವಣೂರಿನ ಬಿ.ಇ.ಎಸ್ ಹೆಣ್ಣು ಮಕ್ಕಳ ಪ್ರೌಢಶಾಲೆಗೆ ಮೊದಲ ಸ್ಥಾನ ಲಭಿಸಿದೆ.
ಹಾವೇರಿ: ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಭಗತ್‌ಸಿಂಗ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರಾತ್ಯಕ್ಷಿಕೆ ಸಿದ್ಧಪಡಿಸಿದ್ದ ಸವಣೂರಿನ ಬಿ.ಇ.ಎಸ್ ಹೆಣ್ಣು ಮಕ್ಕಳ ಪ್ರೌಢಶಾಲೆಗೆ ಮೊದಲ ಸ್ಥಾನ ಲಭಿಸಿದೆ.
ಕಂಚಿನೆಗಳೂರಿನ ಸರ್ಕಾರಿ ಪ್ರೌಢಶಾಲೆ ಹಾಗೂ ಮೇವುಂಡಿಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನ ಪಡೆದರು.ಸ್ಪರ್ಧೆಯಲ್ಲಿ ಜಿಲ್ಲೆಯ ೪೦ ಶಾಲೆಗಳ ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿದ್ದವು. ಮೊದಲ ಸ್ಥಾನ ಪಡೆದ ಶಾಲೆಗೆ ₹ 15 ಸಾವಿರ ನಗದು, ಎರಡನೇ ಸ್ಥಾನ ಪಡೆದ ಶಾಲೆಗೆ ₹10 ಸಾವಿರ ನಗದು ಹಾಗೂ ಮೂರನೇ ಸ್ಥಾನ ಪಡೆದ ಶಾಲೆಗೆ ₹ 5 ಸಾವಿರ ನಗದು ಬಹುಮಾನ ನೀಡಲಾಯಿತು.
ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳ ವಿಜ್ಞಾನ ಮಾದರಿಗಳನ್ನು ಡಯಟ್ ಉಪನಿರ್ದೇಶಕ ಗಿರೀಶ್ ಪದಕಿ ವೀಕ್ಷಿಸಿದರು. ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ ಜಂಗಮಶೆಟ್ಟಿ, ಮಾತನಾಡಿ, ಮಕ್ಕಳು ತಮ್ಮ ಜೀವನದಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.ಭಗತ್ ಕಾಲೇಜಿನ ಎಂ.ಬಿ. ಸತೀಶ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪ್ರಕಾಶ ಶೆಟ್ಟಿ, ರತನ್ ಕಾಶಪ್ಪನವರ ಇದ್ದರು.