ಸಾರಾಂಶ
ಬೆಸ್ಕಾಂ ವ್ಯಾಪ್ತಿಯಲ್ಲಿ 30 ದಿನದವರೆಗೆ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೆ ಒಳಗಾಗದಂತೆ ಸೆ. 8 ಮತ್ತು 15 ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರುತ್ತವೆ ಎಂದು ಬೆಸ್ಕಾಂ ತಿಳಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಸ್ಕಾಂ ವ್ಯಾಪ್ತಿಯಲ್ಲಿ 30 ದಿನದವರೆಗೆ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೆ ಒಳಗಾಗದಂತೆ ಸೆ. 8 ಮತ್ತು 15 ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರುತ್ತವೆ ಎಂದು ಬೆಸ್ಕಾಂ ತಿಳಿಸಿದೆ.ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದರೆ ಅಥವಾ ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದರೆ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ. ಹೀಗಾಗಿ ಆನ್‌ಲೈನ್ ಪೇಮೆಂಟ್ ಬಳಸದವರು ವಿದ್ಯುತ್ ಶುಲ್ಕ ಪಾವತಿಗೆ ಅನುವಾಗುವಂತೆ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್ ಪಾವತಿಸಬೇಕು. 30 ದಿನಗಳ ಬಳಿಕವೂ ₹100 ಕ್ಕಿಂತ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸಂರ್ಪಕಗಳನ್ನು ಮೀಟರ್ ರೀಡಿಂಗ್‌ಗೆ ಬರುವ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ಈ ಮೊದಲೇ ತಿಳಿಸಿತ್ತು.