ನಾಳೆ ವಿದ್ಯುತ್ ಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುತ್ತಿಗೆ: ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪೂಜಾರಪ್ಪ

| Published : Feb 23 2025, 12:36 AM IST

ನಾಳೆ ವಿದ್ಯುತ್ ಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುತ್ತಿಗೆ: ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪೂಜಾರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ಗಡಿ ಗ್ರಾಮಗಳಲ್ಲಿ ವಿದ್ಯುತ್‌ ಅಭಾವದಿಂದ ಕಗ್ಗತ್ತಲಲ್ಲಿ ವಾಸಮಾಡುವ ಸ್ಥಿತಿ ನಿರ್ಮಾಣವಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಮೊಬೈಲ್‌ ಟಾರ್ಚ್‌ ಹಾಗೂ ದೀಪದ ಬೆಳಕಿನಲ್ಲಿ ಪಾಠ- ಪ್ರವಚನ ಓದಿಕೊಳ್ಳುವ ಸ್ಥಿತಿ ಎದುರಾಗಿದೆ.

ಕನ್ನಡಪ್ರಭವಾರ್ತೆ ಪಾವಗಡ

ಇಲ್ಲಿನ ವಿದ್ಯುತ್‌ ಇಲಾಖೆಯ ಅಧಿಕಾರಿಗಳ ವೈಫಲ್ಯದಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್‌ ಸಮಸ್ಯೆ ಉಂಟಾಗಿದೆ. ನಿರಂತರ ಜ್ಯೋತಿಯಡಿ ರೈತರಿಗೆ 3 ಫೇಸ್ ವಿದ್ಯುತ್ ಸರಬರಾಜಿಗೆ ಒತ್ತಾಯಿಸಿ ನೂರಾರು ರೈತ ಮುಖಂಡರ ಜತೆ ಇದೇ ಫೆ.24ರಂದು ಬೆಳಗ್ಗೆ 11ಗಂಟೆಗೆ ಇಲ್ಲಿನ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪಾವಗಡದ ಪೂಜಾರಪ್ಪ ತಿಳಿಸಿದ್ದಾರೆ.

ಶನಿವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನ ಗಡಿ ಗ್ರಾಮಗಳಲ್ಲಿ ವಿದ್ಯುತ್‌ ಅಭಾವದಿಂದ ಕಗ್ಗತ್ತಲಲ್ಲಿ ವಾಸಮಾಡುವ ಸ್ಥಿತಿ ನಿರ್ಮಾಣವಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಮೊಬೈಲ್‌ ಟಾರ್ಚ್‌ ಹಾಗೂ ದೀಪದ ಬೆಳಕಿನಲ್ಲಿ ಪಾಠ- ಪ್ರವಚನ ಓದಿಕೊಳ್ಳುವ ಸ್ಥಿತಿ ಎದುರಾಗಿದೆ.

ಈ ಸಂಬಂಧ ಹಲವು ಬಾರಿ ಮನವಿ ಮಾಡಿದರೂ ಇಲ್ಲಿನ ಬೆಸ್ಕಾಂ ಎಇಇ ಕೃಷ್ಣಮೂರ್ತಿ ಹಾಗೂ ಜೆಇಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಿದರು.

ಹೀಗಾಗಿ ವಿದ್ಯುತ್‌ ಸಮಸ್ಯೆ ಹಾಗೂ ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಸ್ಕಾಂ ಮುತ್ತಿಗೆ ಹಾಕುವ ಮೂಲಕ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಇಲಾಖೆ ಬಳಿ ಮುಷ್ಕರ ಹೂಡುವುದಾಗಿ ಅವರು ತಿಳಿಸಿದರು. ರೈತ ಸಂಘದ ತಾಲೂಕು ಅಧ್ಯಕ್ಷ ಶಿವು, ವೀರಭದ್ರಪ್ಪ, ರಾಮಾಂಜಿನಪ್ಪ,ಚಿತ್ತಪ್ಪ,ಸದಾಶಿವಪ್ಪ ಸೇರಿ ಹಲವು ರೈತ ಮುಖಂಡರಿದ್ದರು.