ಸಾರಾಂಶ
ಗಂಗಾವತಿ: ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ವ್ಯವಹಾರದ ಜ್ಞಾನ ಮುಖ್ಯ ಎಂದು ಅಕ್ಷರ ಪಬ್ಲಿಕ್ ಶಾಲೆಯ ಅಧ್ಯಕ್ಷ ರವಿಚೈತನ್ಯ ರೆಡ್ಡಿ ಹೇಳಿದರು.ನಗರದ ಅಕ್ಷರ ಪಬ್ಲಿಕ್ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಆಹಾರ ತಯಾರಿಕೆ ಹಾಗೂ ಮಾರಾಟ ಮೇಳ ಆಯೋಜಿಸಿದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ರತಿನಿತ್ಯ ಕ್ಲಾಸಲ್ಲಿ ಪಾಠ ಕೇಳಬೇಕಾದ ವಿದ್ಯಾರ್ಥಿಗಳೆಲ್ಲಾ ಇವತ್ತು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದು, ವಿದ್ಯಾರ್ಥಿಗಳೇ ಬಗೆ ಬಗೆಯ ತಿಂಡಿ ತಿನಿಸುಗಳನ್ನ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ವ್ಯವಹಾರದ ಪ್ರಾಯೋಗಿಕ ಜ್ಞಾನ ತಿಳುವಳಿಕೆ ಬರಬೇಕು. ಮನೆಯಲ್ಲಿ ಅಡುಗೆ ಮಾಡುವ ಸಂದರ್ಭದಲ್ಲಿ ಮಕ್ಕಳು ಪಾಲಕರಿಗೆ ಸಹಾಯ ಮಾಡುವ ಮನೋಭಾವನೆ ಬರಬೇಕೆಂಬ ಉದ್ದೇಶದಿಂದ ಪ್ರತಿ ವರ್ಷ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.ವಿದ್ಯಾರ್ಥಿಗಳ ಜೊತೆ ಶಿಕ್ಷಕರೂ ಸ್ಟಾಲ್‌ಗಳಿಗೆ ಭೇಟಿ ಕೊಟ್ಟು ತಮ್ಮ ವಿದ್ಯಾರ್ಥಿಗಳು ತಯಾರಿಸಿದ ಆಹಾರಗಳನ್ನು ಖರೀದಿಸುತ್ತಿದ್ದಾರೆ ಎಂದರು.ಈ ಸಂದರ್ಭದಲ್ಲಿ ಮುಖ್ಯ ಉಪಾಧ್ಯಾಯಿನಿ ಹಿಮಾರೆಡ್ಡಿ, ತೇಜಸ್ವಿ, ಶಿಕ್ಷಕ ವೃಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲಕರು ಉಪಸ್ಥಿತರಿದ್ದರು.