ಸಾರಾಂಶ
ಕೋಟ ಪಂಚವರ್ಣ ಯುವಕ ಮಂಡಲ- ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ೨೭ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಕೋಟ
ಕನ್ನಡ ಕಟ್ಟುವ ಕಾಯಕದ ನಡುವೆ ಪರಿಸರ ಉಳಿಸುವ ಪಂಚವರ್ಣ ಸಂಸ್ಥೆ ಕಾರ್ಯವೈಖರಿ ನಿಜಕ್ಕೂ ಪ್ರಶಂಸನೀಯ ಎಂದು ಕೋಟ ಆರಕ್ಷಕ ಠಾಣಾಧಿಕಾರಿ ರಾಘವೇಂದ್ರ ಹೇಳಿದರು.ಅವರು ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ- ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ೨೭ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೆರಿಸಿ ಮಾತನಾಡಿದರು.ಕೋಟ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಬಿ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ, ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ಶುಭಾಶಂಸನೆಗೈದರು.ಯುವಕ ಮಂಡಲ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಅಧ್ಯಕ್ಷತೆ ವಹಿಸಿದ್ದರು. ಪರಿಸರವಾದಿ ಕೋ.ಗಿ.ನಾ., ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್, ಪಂಚವರ್ಣ ಸಂಸ್ಥೆಯ ಗೌರವ ಸಲಹೆಗಾರ ಕೆ.ದಿನೇಶ್ ಗಾಣಿಗ, ಪಾಂಚಜನ್ಯ ಹೋಮ್ ಪ್ರಾಡೆಕ್ಟ್ ಮಾಲಿಕ ಗೋಪಾಲಕೃಷ್ಣ ಮಯ್ಯ, ಹಂದಟ್ಟು ಮಹಿಳಾ ಬಳಗದ ಸ್ಥಾಪಾಕಾಧ್ಯಕ್ಷೆ ಪುಷ್ಭಾ ಕೆ.ಹಂದಟ್ಟು, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಉಪಸ್ಥಿರಿದ್ದರು.ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್ ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಯುವಕ ಮಂಡಲದ ಕಾರ್ಯದರ್ಶಿ ಸುಧೀಂದ್ರ ಜೋಗಿ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು. ಕಾರ್ಯಕ್ರಮದ ನಂತರ ಕನ್ನಡ ವಾಹನ ಶೋಭಾಯಾತ್ರೆಗೆ ಕೋಟ ಠಾಣಾಧಿಕಾರಿ ರಾಘವೇಂದ್ರ ಚಾಲನೆ ನೀಡಿದರು.