ರಕ್ತದಾನ ಶ್ರೇಷ್ಠದಾನ: ಡಾ. ಗಣನಾಥ ಎಕ್ಕಾರು

| Published : Oct 26 2024, 01:09 AM IST

ಸಾರಾಂಶ

ಅವರು ಪೂರ್ಣ ಪ್ರಜ್ಞ ಕಾಲೇಜಿನ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಎನ್‌ಸಿಸಿ ಅರ್ಮಿ, ಎನ್‌ಸಿಸಿ ನೇವಿ, ರೇಂಜರ್ಸ್- ರೋವರ್ಸ್‌, ಭಾರತೀಯ ರೆಡ್‌ಕ್ರಾಸ್ ಉಡುಪಿ ಜಿಲ್ಲಾ ಘಟಕ ಮತ್ತು ಕುಂದಾಪುರ ಘಟಕ, ಲಿಯೋ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್‌ನ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು ಉಳಿಸುವ ಪವಿತ್ರ ಕಾರ್ಯವಾಗಿದೆ ಎಂದು ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು.ಅವರು ಪೂರ್ಣ ಪ್ರಜ್ಞ ಕಾಲೇಜಿನ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಎನ್‌ಸಿಸಿ ಅರ್ಮಿ, ಎನ್‌ಸಿಸಿ ನೇವಿ, ರೇಂಜರ್ಸ್- ರೋವರ್ಸ್‌, ಭಾರತೀಯ ರೆಡ್‌ಕ್ರಾಸ್ ಉಡುಪಿ ಜಿಲ್ಲಾ ಘಟಕ ಮತ್ತು ಕುಂದಾಪುರ ಘಟಕ, ಲಿಯೋ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್‌ನ ಆಶ್ರಯದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತಾನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ರಾಮು ಎಲ್. ವಹಿಸಿದ್ದರು. ಕುಂದಾಪುರ ರೆಡ್‌ಕ್ರಾಸ್ ಘಟಕದ ಸಭಾಪತಿ ಜಯಕರ ಶೆಟ್ಟಿ ರಕ್ತದಾನದ ಮಹತ್ವವನ್ನು ವಿವರಿಸಿದರು.

ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ಕೋಶಾಧಿಕಾರಿ ಶಿವರಾಮ ಶೆಟ್ಟಿ, ಐಕ್ಯುಎಸಿ ಸಂಯೋಜಕ ಡಾ. ವಿನಯ್ ಕುಮಾರ್, ಯುವ ರೆಡ್‌ಕ್ರಾಸ್ ಸಂಯೋಜಕಿ ಅನುಷಾ ಕೆ., ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಾಮ ಕೆ. ಸ್ವಾಗತಿಸಿದರು. ವಿದ್ಯಾರ್ಥಿನಿ ರತ್ನಶ್ರೀ ನಿರೂಪಿಸಿದರು. ಕ್ಷಮಾ ವಂದಿಸಿದರು.