ನಾಗಮಂಗಲ ಪತ್ರಕರ್ತರ ಸಂಘಕ್ಕೆ ಅತ್ಯುತ್ತಮ ಪತ್ರಕರ್ತರ ಸಂಘ ಪ್ರಶಸ್ತಿ

| Published : Jan 21 2025, 12:32 AM IST

ನಾಗಮಂಗಲ ಪತ್ರಕರ್ತರ ಸಂಘಕ್ಕೆ ಅತ್ಯುತ್ತಮ ಪತ್ರಕರ್ತರ ಸಂಘ ಪ್ರಶಸ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ತುಮಕೂರಿನಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 39ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ನಾಗಮಂಗಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಕಳೆದ ಒಂದು ವರ್ಷದಲ್ಲಿ ಸಾಂಘಿಕ ಮತ್ತು ಕ್ರೀಯಾಶೀಲ ಚಟುವಟಿಕೆಗಳನ್ನು ನಡೆಸಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಿದೆ.

ಕನ್ನಡಪ್ರಭವಾರ್ತೆ ನಾಗಮಂಗಲ

ನಾಗಮಂಗಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ತಾಲೂಕು ಮಟ್ಟದ ಅತ್ಯುತ್ತಮ ಪತ್ರಕರ್ತರ ಸಂಘ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ತುಮಕೂರಿನಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 39ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ನಾಗಮಂಗಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಕಳೆದ ಒಂದು ವರ್ಷದಲ್ಲಿ ಸಾಂಘಿಕ ಮತ್ತು ಕ್ರೀಯಾಶೀಲ ಚಟುವಟಿಕೆಗಳನ್ನು ನಡೆಸಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಿದೆ.

ಭಾನುವಾರ ಸಂಜೆ ನಡೆದ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಚಿಕ್ಕನಾಯನಹಳ್ಳಿ ಶಾಸಕ ಸಿ.ಬಿ.ಸುರೇಶ್‌ಬಾಬು, ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ಗೌಡ, ಮ್ಯಾಗ್ಗೆಸೆ ಪ್ರಶಸ್ತಿ ಪುರಸ್ಕೃತ ಪಿ.ಸಾಯಿನಾಥ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ನಾಗಮಂಗಲ ತಾಲೂಕು ಸಂಘದ ಅಧ್ಯಕ್ಷ ಕೆ.ಸೀತಾರಾಮು ಮತ್ತು ಪ್ರಧಾನ ಕಾರ್ಯದರ್ಶಿ ವಸಂತಕುಮಾರ್‌ಗೆ ತಾಲೂಕು ಮಟ್ಟದ ಅತ್ಯುತ್ತಮ ಪತ್ರಕರ್ತರ ಸಂಘ ಪ್ರಶಸ್ತಿ ನೀಡಿ ಗೌರವಿಸಿದರು.

ರಾಜ್ಯ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ತುಮಕೂರು ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರಷೋತ್ತಮ, ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್, ರಾಜ್ಯ ಸಮಿತಿ ಸದಸ್ಯ ಸಿ.ಎನ್.ಮಂಜುನಾಥ್, ತಾಲೂಕು ಸಂಘದ ಮಾಜಿ ಅಧ್ಯಕ್ಷ ಪಿ.ಜೆ.ಜಯರಾಮ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಎಲ್ಲಾ ಸದಸ್ಯರು ಇದ್ದರು.

ನಾಗಮಂಗಲ ತಾಲೂಕು ಪತ್ರಕರ್ತರ ಸಂಘಕ್ಕೆ ಉತ್ತಮ ಪ್ರಶಸ್ತಿ ಲಭಿಸಲು ನೆರವಾದ ರಾಜ್ಯ ಮತ್ತು ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಧ್ಯಕ್ಷ ಕರಡಹಳ್ಳಿ ಸೀತಾರಾಮು ಅಭಿನಂದನೆ ಸಲ್ಲಿಸಿದ್ದಾರೆ.