ಜನಸಾಮಾನ್ಯರಿಗೆ ಅತ್ಯುತ್ತಮ ಅಂಚೆ ವಿಮಾ ಯೋಜನೆ: ಸುಧಾಕರ ಮಲ್ಯ

| Published : Sep 02 2024, 02:06 AM IST

ಜನಸಾಮಾನ್ಯರಿಗೆ ಅತ್ಯುತ್ತಮ ಅಂಚೆ ವಿಮಾ ಯೋಜನೆ: ಸುಧಾಕರ ಮಲ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಅಂಚೆ ಇಲಾಖೆಯ ಅಪಘಾತ ವಿಮಾ ಯೋಜನೆ ಆದಿತ್ಯ ಬಿರ್ಲಾ ಸಂಸ್ಥೆಯ ಜತೆ ಒಡಂಬಡಿಕೆಯೊಂದಿಗೆ ಜಾರಿಯಾಗಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಅಂಚೆ ಅಪಘಾತ ವಿಮಾ ಯೋಜನೆ ದೇಶದ ಅತ್ಯುತ್ತಮವಾದ, ಸರಳ, ಜನಸಾಮಾನ್ಯರ ಕೈಗೆಟುಕುವ ವಿಮಾ ಯೋಜನೆಯಾಗಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಸುಧಾಕರ ಮಲ್ಯ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಸಂಘದ ಸದಸ್ಯರಿಗೆ ಪತ್ರಕರ್ತರ ಕ್ಷೇಮಾಭಿವೃದ್ಧಿ ಯೋಜನೆಯಿಂದ ಪತ್ರಿಕಾ ಭವನದಲ್ಲಿ ಭಾನುವಾರ ಅಂಚೆ ಅಪಘಾತ ವಿಮಾ ಯೋಜನೆಯ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಂಚೆ ಇಲಾಖೆಯ ಅಪಘಾತ ವಿಮಾ ಯೋಜನೆ ಆದಿತ್ಯ ಬಿರ್ಲಾ ಸಂಸ್ಥೆಯ ಜತೆ ಒಡಂಬಡಿಕೆಯೊಂದಿಗೆ ಜಾರಿಯಾಗಿದೆ. 10 ಮತ್ತು 15 ಲಕ್ಷ ರು. ಮೊತ್ತದ ಅಪಘಾತ ವಿಮಾ ಯೋಜನೆಗೆ ಕ್ರಮವಾಗಿ 549 ರು., 749 ರು. ವಿಮಾ ಕಂತು ಪಾವತಿಸಿದ ಬಳಿಕ ಯಾವುದೇ ಅಂಚೆ ಕಚೇರಿ ಮೂಲಕ ದಾಖಲೆ ಸಲ್ಲಿಸಿ ಸಣ್ಣ ಪುಟ್ಟ ಅಪಘಾತ ಸಂಭವಿಸಿದಾಗ ನಿರ್ದಿಷ್ಟ ವಿಮಾ ಪರಿಹಾರ ಮೊತ್ತ ಪಡೆಯಬಹುದು. ಶಾಶ್ವತ ಅಂಗ ವೈಕಲ್ಯದ ಸಂದರ್ಭದಲ್ಲಿ ಮತ್ತು ಮರಣ ಸಂದರ್ಭದಲ್ಲಿ ಪೂರ್ಣ ಪ್ರಮಾಣದ ವಿಮಾ ಮೊತ್ತ ಪಡೆಯಬಹುದು ಎಂದರು.ಪತ್ರಕರ್ತರಿಗೆ ವಿಮಾ ನೋಂದಾವಣೆ ಉಚಿತವಾಗಿದೆ. ಪ್ರತಿಯೊಬ್ಬರ ವಿಮಾ ವಾರ್ಷಿಕ ಪಾಲಿಸಿ 549 ರು. ವೆಚ್ಚವನ್ನು ಪತ್ರಕರ್ತರ ಕ್ಷೇಮಾಭಿವೃದ್ಧಿ ಯೋಜನೆಯಿಂದ (ಒಂದು ವರ್ಷಕ್ಕೆ) ಪಾವತಿಸಲಾಗುತ್ತಿದೆ ಎಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾಹಿತಿ ನೀಡಿದರು.

ಇಂಡಿಯನ್ ಪೋಸ್ಟಲ್ ಬ್ಯಾಂಕ್ ಮಂಗಳೂರು ವ್ಯವಸ್ಥಾಪಕ ಶಿಯಾಝ್ ಬಿ., ಭಾರತೀಯ ಅಂಚೆ ಇಲಾಖೆಯ ಮಂಗಳೂರು ಪ್ರಧಾನ ಅಂಚೆ ಕಚೇರಿಯ ಅಸಿಸ್ಟೆಂಟ್ ಪೋಸ್ಟ ಮಾಸ್ಟರ್ ಎಚ್ .ಆರ್. ಚಂದ್ರಶೇಖರ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಕಾರ್ಯಕಾರಿ ಸಮಿತಿ ಸದಸ್ಯ ಆರಿಫ್ ಪಡುಬಿದ್ರಿ, ಸಂದೇಶ್ ಜಾರ, ಸತೀಶ್ ಇರಾ ಇದ್ದರು.

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ನಿರೂಪಿಸಿದರು.