ಉತ್ತರ ಕನ್ನಡ ಜಿಪಂ ಸಿಇಒಗೆ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿ

| Published : Jan 26 2024, 01:47 AM IST

ಉತ್ತರ ಕನ್ನಡ ಜಿಪಂ ಸಿಇಒಗೆ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯಮಟ್ಟದ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿಗೆ ಭಾಜನರಾಗಿರುವ ಉತ್ತರ ಕನ್ನಡ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಗುರುವಾರ ಪ್ರಶಸ್ತಿ ಸ್ವೀಕರಿಸಿದರು.

ಕಾರವಾರ:

ರಾಜ್ಯಮಟ್ಟದ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿಗೆ ಭಾಜನರಾಗಿರುವ ಉತ್ತರ ಕನ್ನಡ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಗುರುವಾರ ಪ್ರಶಸ್ತಿ ಸ್ವೀಕರಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆ- 2023ರಲ್ಲಿ ಜಿಲ್ಲೆಯ ಸ್ವೀಪ್ (SVEEP) ನೋಡಲ್ ಅಧಿಕಾರಿಗಳಾಗಿ ಸ್ವೀಪ್ ಚಟುವಟಿಕೆ ಆಯೋಜಿಸುವ ಮೂಲಕ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ರಾಜ್ಯ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಮತದಾರರ ದಿನ-2024ರ ನಿಮಿತ್ತ ಕೊಡಮಾಡುವ ರಾಜ್ಯಮಟ್ಟದ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿಗೆ ಕಾಂದೂ ಭಾಜನನರಾಗಿದ್ದು, ಅವರಿಗೆ ಗುರುವಾರ ಬೆಂಗಳೂರಿನ ಟೌನ್‍ಹಾಲ್‍ನಲ್ಲಿ ಹಮ್ಮಿಕೊಂಡಿದ್ದ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.ಜಿಲ್ಲೆಯಲ್ಲಿ ವಿನೂತನವಾಗಿ ಸ್ವೀಪ್ ಕಾರ್ಯಕ್ರಮಗಳಾದ ಬೋಟ್, ಬೈಕ್, ವಿಶೇಷಚೇತನರ ಬೈಕ್ ರ್‍ಯಾಲಿ, ಯುವ ಸಂವಾದ, ಸ್ಕೂಬಾ ಡೈವಿಂಗ್, ಹಿರಿಯ ನಾಗರಿಕರ ಆರೋಗ್ಯ ತಪಾಸಣೆ, ಮಾದರಿ ಮತಗಟ್ಟೆ ಹಾಗೂ ಫಲಪುಷ್ಪ ಪ್ರದರ್ಶನಗಳಂತಹ ವಿವಿಧ ವಿನೂತನ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಯುವ ಮತ್ತು ಹಿರಿಯ ನಾಗರಿಕರನ್ನು ಆಕರ್ಷಿಸಿ ಮತದಾನದಲ್ಲಿ ಭಾಗವಹಿಸಿ ಹೆಚ್ಚು ಮತದಾನವಾಗಲು ಶ್ರಮಿಸಿದ ಕಾಂದೂ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ ಮೀನಾ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಅಪರ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಹಾಗೂ ಕೂರ್ಮರಾವ್ ಇದ್ದರು.