ಅತ್ಯುತ್ತಮ ಶಿಕ್ಷಕರ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರಕಟ

| Published : Sep 05 2024, 12:41 AM IST

ಅತ್ಯುತ್ತಮ ಶಿಕ್ಷಕರ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರಕಟ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಸಕ್ತ(2024-25) ಸಾಲಿನಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಗುರುವಾರ ಬೆಳಗ್ಗೆ 10ಕ್ಕೆ ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಪ್ರಸಕ್ತ(2024-25) ಸಾಲಿನಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ 10ಕ್ಕೆ ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಜರಿದ್ದು, ಪ್ರಶಸ್ತಿ ಸ್ವೀಕರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು ಕೋರಿದ್ದಾರೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರ ಹೆಸರು: ಸೋಮವಾರಪೇಟೆ ತಾಲೂಕು ಕುಶಾಲನಗರ ಜೇನುಕಲ್ಲು ಬೆಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಂ.ಎನ್.ರಾಮೇಗೌಡ, ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎ.ಎಸ್.ವಾಸುವರ್ಮ, ಮಡಿಕೇರಿ ತಾಲೂಕಿನ ಚೇರಂಡೇಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೆ.ಜಿ.ಚೈತ್ರ, ಹಿರಿಯ ಪ್ರಾಥಮಿಕ ಶಾಲಾ ವಿಭಾಗ: ಸೋಮವಾರಪೇಟೆ ತಾಲ್ಲೂಕಿನ ಗೋಣಿಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಆರ್.ಸುನೀತಾ, ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೆ.ಎಸ್.ಜಾನ್ಸಿ, ಮಡಿಕೇರಿ ಕೆ.ಪಿ.ಬಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪಿ.ಕೆ.ಗಂಗಮ್ಮ.

ಪ್ರೌಢಶಾಲಾ ವಿಭಾಗ: ಸೋಮವಾರಪೇಟೆ ತಾಲೂಕಿನ ಗೌಡಳ್ಳಿಯ ಗೌಡಳ್ಳಿ ಪ್ರೌಢಶಾಲೆಯ ಎಸ್.ಎನ್.ಪೂವಯ್ಯ, ವಿರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ ಸರ್ಕಾರಿ ಪ್ರೌಢಶಾಲೆಯ ಕೆ.ಡಿ.ಕವಿತ, ಮಡಿಕೇರಿ ತಾಲೂಕಿನ ಚೇರಂಬಾಣೆ ಅರುಣ ಅನುದಾನಿತ ಪ್ರೌಢಶಾಲೆಯ ಸಿ.ಆರ್.ಲೋಕೇಶ್, ಮಡಿಕೇರಿ ತಾಲೂಕಿನ ಭಾಗಮಂಡಲ ಜ್ಞಾನೋದಯ ಶಾಲೆಯ ಶ್ವೇತನ್ ಚಂಗಪ್ಪ, ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಜೆ.ಸಿ.ಶಾಲೆಯ ಎನ್.ಬಿ.ಸತೀಶ್, ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಶ್ರೀ ಸದಾಶಿವ ಸ್ವಾಮೀಜಿ ಶಾಲೆಯ ಕೆ.ಎಸ್.ತನುಜ.

ಅನುದಾನರಹಿತ ಶಾಲೆಗಳ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರು: ಮಡಿಕೇರಿ ತಾಲೂಕಿನ ಶ್ರೀರಾಜೇಶ್ವರಿ ವಿದ್ಯಾಲಯದ ಬಿ.ಎ.ಪಾರ್ವತಿ, ವಿರಾಜಪೇಟೆ ತಾಲೂಕಿನ ಪ್ರಗತಿ ಶಾಲೆಯ ಎ.ಎನ್.ರೇಖಾ, ಸೋಮವಾರಪೇಟೆ ತಾಲೂಕಿನ ಚೌಡ್ಲು ಸಾಂದಿಪನ ಶಾಲೆಯ ವಸಂತ ಕುಮಾರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.