ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಕಾರ್ಯಕ್ರಮ

| Published : Feb 13 2024, 12:46 AM IST

ಸಾರಾಂಶ

ಶಹಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ನಡೆದ ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ.

ಕನ್ನಡಪ್ರಭ ವಾರ್ತೆ ಶಹಾಪುರ

ತಾಲೂಕಿನ ದೋರನಹಳ್ಳಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಶಹಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ನಡೆದ ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ಬಾಲ್ಯವಿವಾಹ ನಿಷೇಧ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ, ಕಾಯ್ದೆಗಳು ಸುರಕ್ಷಿತ, ಅಸುರಕ್ಷಿತ, ಸ್ಪರ್ಶ ಮುಟ್ಟಿನ ನೈರ್ಮಲ್ಯ ಕುರಿತು ಜಾಗೃತಿ ಮೂಡಿಸಲಾಯಿತು.

ಶಹಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಣ್ಣ ದೇಸಾಯಿ ಮಾತನಾಡಿ, ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮದ ಮಹತ್ವ ತಿಳಿಸಿದರು. ದೋರನಹಳ್ಳಿ ವೈದ್ಯಾಧಿಕಾರಿ ಡಾ. ರಾಜೇಶ್ವರಿ ಅವರು, ಮುಟ್ಟಿನ ನೈರ್ಮಲ್ಯ ಕುರಿತು ವಿವರವಾಗಿ ಬಾಲಕಿಯರಿಗೆ ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾನೂನು ಮತ್ತು ಪರೀವೀಕ್ಷಣ ಅಧಿಕಾರಿ ರಾಜೇಂದ್ರ ಯಾದವ ಅವರು ಮಾತನಾಡಿ, ಬಾಲ್ಯವಿವಾಹ ನಿಷೇಧ-2006, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ-2012, ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶ ಕುರಿತು ಹೇಳಿದರು.

ಶಹಾಪುರ ತಾಪಂ ಸಹಾಯಕ ನಿರ್ದೇಶಕ ಭೀಮನಗೌಡ, ಗ್ರಾಪಂ ಅಧ್ಯಕ್ಷೆ ಚಂದ್ರವತಿ, ಮುಖ್ಯಗುರು ಶಾಂತಗೌಡ, ಪಿಡಿಒ ದೇವರಾಜ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಯೋಗಿತಾಬಾಯಿ, ಹಿರಿಯ ಮೇಲ್ವಿಚಾರಕಿ ಕವಿತಾ ಕುಲಕರ್ಣಿ ಇತರರಿದ್ದರು.