ಮತ ಕಳ್ಳತನದ ಮೂಲಕ ಪ್ರಜಾಪ್ರಭುತ್ವಕ್ಕೆ ದ್ರೋಹ: ಅಶ್ವತ್ಥನಾರಾಯಣ

| Published : Oct 21 2025, 01:00 AM IST

ಮತ ಕಳ್ಳತನದ ಮೂಲಕ ಪ್ರಜಾಪ್ರಭುತ್ವಕ್ಕೆ ದ್ರೋಹ: ಅಶ್ವತ್ಥನಾರಾಯಣ
Share this Article
  • FB
  • TW
  • Linkdin
  • Email

ಸಾರಾಂಶ

ನಮ್ಮ ಪಕ್ಷದ ವರಿಷ್ಠರು ಹಾಗೂ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ವೋಟ್ ಚೋರಿ ಬಗ್ಗೆ ಸಾಕ್ಷಿ ಸಮೇತ ಬಹಿರಂಗಗೊಳಿಸುವುದರೊಂದಿಗೆ ಅವರು ನೀಡಿರುವ ದಾಖಲೆಗಳಿಗೆ ಇದುವರೆಗೂ ಚುನಾವಣಾ ಆಯೋಗ ಗಂಭೀರವಾದ ಮತ್ತು ಸಮರ್ಪಕವಾದ ಉತ್ತರ ನೀಡಿಲ್ಲ.

ಕನ್ನಡಪ್ರಭ ವಾರ್ತೆ ಕೊರಟಗೆರೆವೋಟ್ ಚೋರಿ ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಪಕ್ಷ ಅಧಿಕಾರ ದುರುಪಯೋಗ ಮಾಡಿಕೊಂಡು ಪ್ರಜಾಪ್ರಭುತ್ವವಕ್ಕೆ ದ್ರೋಹ ಮಾಡಿದೆ ಎಂದು ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ ತಿಳಿಸಿದರು.ಪಟ್ಟಣದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಏರ್ಪಡಿಸಲಾಗಿದ್ದ ವೋಟ್ ಚೋರಿ ವಿರುದ್ಧದ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.ನಮ್ಮ ಪಕ್ಷದ ವರಿಷ್ಠರು ಹಾಗೂ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ವೋಟ್ ಚೋರಿ ಬಗ್ಗೆ ಸಾಕ್ಷಿ ಸಮೇತ ಬಹಿರಂಗಗೊಳಿಸುವುದರೊಂದಿಗೆ ಅವರು ನೀಡಿರುವ ದಾಖಲೆಗಳಿಗೆ ಇದುವರೆಗೂ ಚುನಾವಣಾ ಆಯೋಗ ಗಂಭೀರವಾದ ಮತ್ತು ಸಮರ್ಪಕವಾದ ಉತ್ತರ ನೀಡಿಲ್ಲ. ಚುನಾವಣಾ ಆಯೋಗ ಮತ್ತು ಬಿಜೆಪಿ ಪಕ್ಷದ ಈ ಮತಗಳ್ಳತನದ ವಿರುದ್ದ ನಮ್ಮ ಹೋರಾಟ ನಿಲ್ಲುವುದಿಲ್ಲ. ಸಹಿ ಸಂಗ್ರಹ ಅಭಿಯಾನ ಮುಂದುರಿಯಲಿದ್ದು ಮನೆ ಮನೆಗಳಿಗೆ ಹೋಗಿ ಬಿಜೆಪಿ ಅಧಿಕಾರಿ ದುರುಪಯೋಗದ ಬಗ್ಗೆ ಸತ್ಯದ ಅರಿವು ಮೂಡಿಸುದಾಗಿ ತಿಳಿಸಿದರು. ಮುಖಂಡ ಮಹಲಿಂಗಪ್ಪ ಮಾತನಾಡಿ, ಕಳೆದ ಲೋಕಸಭಾ ಚುನಾವಣೆ ವೇಳೆ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಮತಗಳ್ಳತನ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ ಪ್ರಜಾಪ್ರಭುತ್ವಕ್ಕೆ ಮಾರಕ, ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಬಿಜೆಪಿ ಪಕ್ಷಕ್ಕೆ ಕರ್ನಾಟಕದಲ್ಲಿ ಎಂದೂ ಜನಾದೇಶ ದೊರೆತಿಲ್ಲ, ಹೀಗಾಗಿ ಮತ ಕಳ್ಳತನವನ್ನೇ ಅಸರೆಯಾಗಿಟ್ಟುಕೊಂಡು ಅಧಿಕಾರಕ್ಕೆ ಬಂದಿದ್ದು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ, ಜಾತಿ, ಧರ್ಮದ ಆಧಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುವುದಿಲ್ಲ, ಕಾಂಗ್ರೆಸ್ ಪಕ್ಷ ಹಿಂದುಳಿದವರನ್ನು ಮುನ್ನಲೆಗೆ ತರುವ ಬದ್ಧತೆಯ ರಾಜಕಾರಣ ಮಾಡುವ ಪಕ್ಷ, ಕರ್ನಾಟಕದಲ್ಲಿ ಜಾರಿಯಾಗಿರುವ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಯಾವುದೇ ಜಾತಿ, ಧರ್ಮದ ಆಧಾರದಲ್ಲಿ ಅಲ್ಲ ಎಲ್ಲಾ ಸಮುದಾಯಗಳ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.ಸಹಿ ಸಂಗ್ರಹ ಅಭಿಯಾನದಲ್ಲಿ ಪ.ಪಂ. ಸದಸ್ಯ ಕೆ.ಆರ್.ಓಬಳರಾಜು, ಮಾಜಿ ಉಪಾಧ್ಯಕ್ಷ ಕೆ.ವಿ.ಮಂಜುನಾಥ್, ಎಲ್.ರಾಜಣ್ಣ, ವಿನಯ್‌ಕುಮಾರ್, ಎಚ್.ಎಂ. ರುದ್ರಪ್ರಸಾದ್, ಮಕ್ತಿಯಾರ್, ಗಣೇಶ್, ಅರವಿಂದ್, ಕೆ.ಬಿ.ಲೋಕೇಶ್, ತುಂಗಮಂಜುನಾಥ್, ಭೈರೇಶ್, ಜಯರಾಮ್, ನಾಗರಾಜು, ಮಂಜಮ್ಮ, ಲಕ್ಷ್ಮಿದೇವಮ್ಮ, ಸೇರಿದಂತೆ ಇತರರು ಹಾಜರಿದ್ದರು.(ಚಿತ್ರ ಇದೆ) ೨೦ ಕೊರಟಗೆರೆ ಚಿತ್ರ ೦೧;- ಕೊರಟಗೆರೆ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವೋಟ್ ಚೋರಿ ವಿರುದ್ದ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು.