ಸಾರಾಂಶ
ನಾಪೋಕ್ಲು: ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಯೂನಿಯನ್ ಬ್ಯಾಂಕ್ ವತಿಯಿಂದ ಶನಿವಾರ ಬೆಟ್ಟಗೇರಿಯ ಉದಯ ಶಾಲೆಯ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಳಿಯಂಡ ಕಮಲ ಉತ್ತಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.
ಕೇಂದ್ರ ಸರ್ಕಾರದ ಸೌಲಭ್ಯಗಳ ಕುರಿತು ಸ್ವಸ್ತಿಕ್ ತುಮಕೂರು, ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕ ಬಿನೋದ್ ಬ್ಯಾಂಕ್‌ನಲ್ಲಿ ದೊರಕುವ ಸಾಲ ಸೌಲಭ್ಯಗಳು ಹಾಗೂ ವಿಮಾ ಪಾಲಿಸಿಗಳ ಬಗ್ಗೆ, ವಿಜಯ ವಿನಾಯಕ ಗ್ಯಾಸ್ ಏಜೆನ್ಸಿಯ ವ್ಯವಸ್ಥಾಪಕ ನಿರ್ಮಲಾ ಎನ್.ಕೆ. ಉಜ್ವಲ ಯೋಜನೆಯ ಸೌಲಭ್ಯದ ಕುರಿತು ಮಾಹಿತಿ ನೀಡಿದರು. ಗ್ರಾಮ ಪಂಚಾಯಿರಿ ಅಭಿವೃದ್ಧಿ ಅಧಿಕಾರಿ ಉದಯ, ಹಸಿ ಕಸ ಒಣ ಕಸ ಹಾಗೂ ಸ್ಯಾನಿಟರಿ ಕಸದ ವಿಲೇವಾರಿ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭ ಜನರಿಗೆ ಆಯುಷ್ಮಾನ್ ಭಾರತ, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ದೀನ್ ದಯಾಳ್ ಅಂತ್ಯೋದಯ ಯೋಜನೆ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್, ಪೋಷನ್ ಅಭಿಯಾನ್, ಜಲಜೀವನ್ ಮಿಷನ್ ಸ್ವಾಮಿತ್ವ ಯೋಜನೆ, ಜೀವನ್ ಜ್ಯೋತಿ ವಿಮಾ ಯೋಜನೆ, ಸುರಕ್ಷಾ ವಿಮಾ ಯೋಜನೆ ಅಟಲ್ ಪಿಂಚಣಿ ಯೋಜನೆ, ಪ್ರಧಾನಮಂತ್ರಿ ಪ್ರಣಾಮ ಯೋಜನೆ ಮತ್ತು ಜ್ಞಾನ ಗೊಬ್ಬರಗಳ ಬಗ್ಗೆ ವಿವಿಧ ಇಲಾಖೆ ಹಾಗೂ ಬ್ಯಾಂಕಿನ ಅಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು.
ರೈತರಿಗೆ ಅನುಕೂಲವಾಗುವ ಕಿಸಾನ್ ಡ್ರೋನ್ ಪ್ರದರ್ಶನ ಗಮನ ಸೆಳೆಯಿತು. ಪ್ರದರ್ಶನ ವ್ಯಾನ್‌ನಲ್ಲಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಪ್ರದರ್ಶಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಾರ್ವಜನಿಕರಿಗೆ ಉಚಿತವಾಗಿ ಕ್ಯಾಲೆಂಡರ್, ಮಾಹಿತಿ ಕೈಪಿಡಿಗಳನ್ನು ವಿತರಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉದಯ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉದಯ, ಬ್ಯಾಂಕ್ ವ್ಯವಸ್ಥಾಪಕ ಬಿನೋದ್, ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಲಲಿತಾ ವಿ.ಯು., ಉದಯ ಶಾಲೆಯ ಮಾಜಿ ಆಡಳಿತ ಮಂಡಳಿ ಅಧ್ಯಕ್ಷ ಕೊಡಪಾಲು ಗಣಪತಿ, ಎಪಿಎಂಸಿ ಮಾಜಿ ಅಧ್ಯಕ್ಷ ಬೆಪ್ಪುರನ ಮೇದಪ್ಪ, ಉದಯ ಶಾಲೆಯ ಮುಖ್ಯಶಿಕ್ಷಕಿ ಕವಿತಾ ಎಂ.ಪಿ., ಪಂಚಾಯಿತಿ ಸದಸ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ವಿಜಯ ವಿನಾಯಕ ಗ್ಯಾಸ್ ಏಜೆನ್ಸಿಯ ಜಯಶ್ರೀ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು. ಕಡ್ಲೇರ ತುಳಸಿ ಮೋಹನ್ ಸ್ವಾಗತಿಸಿ, ವಂದಿಸಿದರು.