ಯೋಗ, ಧ್ಯಾನದಿಂದ ಉತ್ತಮ ಆರೋಗ್ಯ: ನ್ಯಾ.ವಿಶ್ವನಾಥ

| Published : Jun 22 2024, 12:52 AM IST

ಸಾರಾಂಶ

ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯವಂತರಾಗಿ ಇರಬೇಕಾದರೆ ಯೋಗ ಮತ್ತು ಧ್ಯಾನ ನಿರಂತರ ಅಭ್ಯಾಸದಿಂದ ಮಾತ್ರ ಸಾಧ್ಯ ಎಂದು ಸ್ಥಳೀಯ ಜೆ.ಎಂ.ಎಫ್.ಸಿ ನ್ಯಾಯಾಲಯ ಹಿರಿಯ ಸಿವಿಲ್ ನ್ಯಾಯಾಧೀಶ ವಿಶ್ವನಾಥ ವಿ. ಮೂಗತಿ ಚನ್ನಗಿರಿಯಲ್ಲಿ ಹೇಳಿದ್ದಾರೆ.

- ಚನ್ನಗಿರಿಯಲ್ಲಿ ವಿವಿಧ ಇಲಾಖೆ, ಸಂಘ-ಸಂಸ್ಥೆಗಳಿಂದ ವಿಶ್ವ ಯೋಗ ದಿನ ಕಾರ್ಯಕ್ರಮ - - - ಕನ್ನಡಪ್ರಭ ವಾರ್ತೆ ಚನ್ನಗಿರಿ

ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯವಂತರಾಗಿ ಇರಬೇಕಾದರೆ ಯೋಗ ಮತ್ತು ಧ್ಯಾನ ನಿರಂತರ ಅಭ್ಯಾಸದಿಂದ ಮಾತ್ರ ಸಾಧ್ಯ ಎಂದು ಸ್ಥಳೀಯ ಜೆ.ಎಂ.ಎಫ್.ಸಿ ನ್ಯಾಯಾಲಯ ಹಿರಿಯ ಸಿವಿಲ್ ನ್ಯಾಯಾಧೀಶ ವಿಶ್ವನಾಥ ವಿ. ಮೂಗತಿ ಹೇಳಿದರು.

ಶುಕ್ರವಾರ ಬೆಳಗ್ಗೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಪತಂಜಲಿ ಯೋಗ ಸೇವಾ ಕೇಂದ್ರ, ಚನ್ನಮ್ಮಾಜಿ ಯೋಗ ಕೇಂದ್ರ, ಲಯನ್ಸ್ ಕ್ಲಬ್, ಶ್ರೀ ದೈವ ಸಂಸ್ಕೃತಿ ಪ್ರತಿಷ್ಠಾನ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಜನರು ಪ್ರತಿದಿನ ಬೆಳಗ್ಗೆ ಯೋಗ, ವ್ಯಾಯಾಮ, ಧ್ಯಾನಗಳನ್ನು ಮಾಡಬೇಕು. ಇದರಿಂದ ಮನಸ್ಸು ಚಂಚಲತೆಯಿಂದ ಏಕಾಗ್ರತೆಯತ್ತ ಬರುವುದಲ್ಲದೇ, ಉತ್ತಮವಾದ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ. ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಒತ್ತಡಗಳ ಕೆಲಸದಿಂದ ಮಾನಸಿಕ ನೆಮ್ಮದಿ ಕೆಡಿಸಿಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬ ನಾಗರೀಕನು ಯೋಗ, ವ್ಯಾಯಾಮ ಧ್ಯಾನಗಳನ್ನು ಮಾಡುತ್ತ ಕಾಯಿಲೆಗಳಿಂದಲೂ ದೂರ ಇರಬಹುದಾಗಿದೆ ಎಂದು ಹೇಳಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಸಿದ್ದಲಿಂಗಯ್ಯ ಗಂಗಾಧರ ಮಠ್ ಮಾತನಾಡಿ ಪ್ರತಿದಿನ ಬೆಳಗಿನ ಸಮಯ ಮತ್ತು ಸಂಜೆಯ ಸಮಯದಲ್ಲಿ ಯೋಗಭ್ಯಾಸ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿ, ವಕೀಲರ ಸಂಘ ಅಧ್ಯಕ್ಷ ಎಂ.ರಾಜಪ್ಪ, ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶಮ ಶ್ರೀವತ್ಸ, ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಜಿ.ಮಹಾಲಕ್ಷ್ಮೀ, ತಹಸೀಲ್ದಾರ್ ಎರ್ರಿಸ್ವಾಮಿ, ಪೊಲೀಸ್ ಉಪಾಧೀಕ್ಷಕ ರುದ್ರಪ್ಪ ಎಸ್.ಉಜ್ಜಿನಕೊಪ್ಪ, ವಲಯ ಅರಣ್ಯಾಧಿಕಾರಿ ಮಧುಸೂಧನ್, ಪತಂಜಲಿ ಯೋಗ ಸೇವಾ ಕೇಂದ್ರದ ವಸಂತಕುಮಾರ್, ಬ್ರಹ್ಮಕುಮಾರಿ ತಾರಕ್ಕ, ಗೌಡರ ಜಯಣ್ಣ, ಪ್ರಕಾಶ್, ಭೂದಿಸ್ವಾಮಿ, ಬಾಬುಜಾನ್, ಅಣ್ಣೇಶ್, ಜಗದೀಶ್, ಮಲ್ಲಿಕಾರ್ಜುನ್, ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ, ಬಿಇಒ ಜಯಣ್ಣ, ಜಿ.ಪಂ. ಮಾಜಿ ಅಧ್ಯಕ್ಷೆ ಮಂಜುಳಾ ಟಿ.ವಿ.ರಾಜು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

- - - -21ಕೆಸಿಎನ್‌ಜಿ1: ವಿಶ್ವ ಯೋಗ ದಿನ ಕಾರ್ಯಕ್ರಮ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ವಿಶ್ವನಾಥ ವಿ. ಮೂಗತಿ ನೆರವೇರಿಸಿದರು. -21ಕೆಸಿಎನ್‌ಜಿ2: ಚನ್ನಗಿರಿ ಪಟ್ಟಣದಲ್ಲಿ ವಿಶ್ವ ಯೋಗ ದಿನ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಯೋಗಭ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಗಾಸನ ಮಾಡಿದರು.