ವಿದ್ಯಾರ್ಥಿ ಜೀವನ ಸುವರ್ಣ ಜೀವನ. ಇಲ್ಲಿ ಮಾಡುವ ಸಣ್ಣ ಸಾಧನೆಯೂ ಮುಂದಿನ ದಿನಗಳಲ್ಲಿ ದೊಡ್ಡ ಸಾಧನೆಗೆ ದಾರಿಯಾಗುತ್ತದೆ. ವಿದ್ಯಾರ್ಥಿಗಳು ಅದೃಷ್ಟದ ಹಿಂದೆ ಹೋಗದೆ ಪರಿಶ್ರಮದ ಹಿಂದೆ ಹೋದರೆ ಮಾತ್ರ ಯಶಸ್ಸು ಸಾಧ್ಯ, ತುಕ್ಕು ಹಿಡಿಯುವುದಕ್ಕಿಂತ ಸವೆದು ಹೋಗುವುದೇ ಲೇಸು ಎಂಬ ಮಾತನ್ನರಿತು ನಡೆಯಬೇಕು ಎಂದು ಆಳ್ವಾಸ್ ಕ್ರೀಡಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರದೀಪ್ ಎಸ್. ಕರೆ ನೀಡಿದರು.
ಉಡುಪಿ: ವಿದ್ಯಾರ್ಥಿ ಜೀವನ ಸುವರ್ಣ ಜೀವನ. ಇಲ್ಲಿ ಮಾಡುವ ಸಣ್ಣ ಸಾಧನೆಯೂ ಮುಂದಿನ ದಿನಗಳಲ್ಲಿ ದೊಡ್ಡ ಸಾಧನೆಗೆ ದಾರಿಯಾಗುತ್ತದೆ. ವಿದ್ಯಾರ್ಥಿಗಳು ಅದೃಷ್ಟದ ಹಿಂದೆ ಹೋಗದೆ ಪರಿಶ್ರಮದ ಹಿಂದೆ ಹೋದರೆ ಮಾತ್ರ ಯಶಸ್ಸು ಸಾಧ್ಯ, ತುಕ್ಕು ಹಿಡಿಯುವುದಕ್ಕಿಂತ ಸವೆದು ಹೋಗುವುದೇ ಲೇಸು ಎಂಬ ಮಾತನ್ನರಿತು ನಡೆಯಬೇಕು ಎಂದು ಆಳ್ವಾಸ್ ಕ್ರೀಡಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರದೀಪ್ ಎಸ್. ಕರೆ ನೀಡಿದರು.
ಇಲ್ಲಿನ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಡಾ. ಎನ್.ಎಸ್.ಎ.ಎಂ. ಪ್ರಥಮ ದರ್ಜೆ ಕಾಲೇಜು ನಿಟ್ಟೆಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ನಿತಿನ್ ಮಾತನಾಡಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು ನನ್ನ ಗುರುಗಳು, ನಾನು ಇಲ್ಲಿಯವರೆಗೆ ಬರಲು ಅವರೂ ಕಾರಣ ಎಂದು ತಮ್ಮ ವಿದ್ಯಾರ್ಥಿ ಜೀವನದ ನೆನಪುಗಳನ್ನು ಹಂಚಿಕೊಂಡರು.
ಇದೇ ಸಂದರ್ಭದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿದ್ದ ‘ಬಿಸಿನೆಸ್ ಫೇರ್’ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ಜ್ಞಾನಸುಧಾ ಪಪೂ ಕಾಲೇಜಿನ ಪ್ರಾಚಾರ್ಯ ಶ್ರೀನಿಧಿ ಭಾಗವತ್ ಸ್ವಾಗತಿಸಿದರು. ಉಪಪ್ರಾಚಾರ್ಯರಾದ ಪ್ರಕಾಶ್ ಜೋಯಿ ಮತ್ತು ಮಣಿಪಾಲ ಜ್ಞಾನಸುಧಾ ಕಾಲೇಜಿನ ಪ್ರಾಚಾರ್ಯ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೇಷ್ಠ ಜೆ. ಕಾರ್ಯಕ್ರಮ ನಿರೂಪಿಸಿದರು.