ದೊಡ್ಡಬಳ್ಳಾಪುರ: ಪ್ರತಿ ದಿನ ನಾವು ಒಂದಲ್ಲ ಒಂದು ರೀತಿಯಲ್ಲಿ ಇಂಟರ್ನೆಟ್ ಬಳಸುತ್ತೇವೆ. ಅದರಿಂದ ಎಷ್ಟು ಉಪಯೋಗ ಇದೆಯೇ ಅಷ್ಟೇ ಅಪಾಯವೂ ಇದ್ದು, ಆನ್ಲೈನ್ ನಲ್ಲಿ ತೋರುವ ಆಸೆ ಆಮಿಷಗಳಿಗೆ ಬಲಿಯಾಗದಿರಿ ಎಂದು ಜಿಪಂ ಉಪಕಾರ್ಯದರ್ಶಿ ಶಿವಕುಮಾರ್ ತಿಳಿಸಿದರು.

ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆಯಿಂದ ಆಯೋಜಿಸಿದ್ದ ಸುರಕ್ಷಿತ ಅಂತರ್ಜಾಲ ದಿನದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಇಂಟರ್ನೆಟ್ ಬಳಕೆಯಲ್ಲಿ ಬಹಳಷ್ಟು ಎಚ್ಚರ ವಹಿಸಬೇಕು, ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಆನ್ಲೈನ್ ಸ್ಕ್ಯಾಮ್ ನಡೆಯುತ್ತಿವೆ, ಬ್ಲ್ಯಾಕ್ ಮೆಲ್, ಆನ್‌ಲೈನ್ ಗೇಮ್ ಈ ರೀತಿಯ ಚಟಗಳಿಗೆ ಇಂದಿನ ಯುವ ಜನತೆ ಮೋಸ ಹೋಗುತ್ತಿದ್ಧಾರೆ. ರೀಲ್ಸ್ ನೋಡುವುದುದರಿಂದ ಸಮಯ ವ್ಯರ್ಥ್ಯ ಮಾಡುತ್ತಿದ್ಧಾರೆ. ಅಂರ್ಜಾಲವನ್ನು ವೃತ್ತಿ ಜೀವನಕ್ಕೆ ಮತ್ತು ವೈಯಕ್ತಿಕ ಜೀವನಕ್ಕೆ ಎಷ್ಟು ಅವಶ್ಯಕತೆ ಇದೆಯೋ ಅಷ್ಟು ಮಾತ್ರ ಬಳಸಿಕೊಳ್ಳಿ ಎಂದು ಹೇಳಿದರು.

"ಸ್ಮಾರ್ಟ್ ತಂತ್ರಜ್ಞಾನ, ಸುರಕ್ಷಿತ ಆಯ್ಕೆಗಳು-ಎಐಯ ಸುರಕ್ಷಿತ ಮತ್ತು ಜವಾಬ್ದಾರಿಯುತ ಬಳಕೆಯ ಅನ್ವೇಷಣೆ ಇಂಟರ್ನೆಟ್ ಬಳಕೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೈಬರ್ ಅಪಾಯಗಳು, ವಂಚನೆಗಳು ಹಾಗೂ ಕೃತಕ ಬುದ್ಧಿಮತೆ(AI) ಯ ಜವಾಬ್ದಾರಿಯುತ ಬಳಕೆಯ ಬಗ್ಗೆ ಸಾರ್ವಜನಿಕರಲ್ಲಿ ವಿಶೇಷವಾಗಿ ಮಕ್ಕಳು, ಮಹಿಳೆಯರು ಮತ್ತು ಯುವಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಯೋಜನಾಧಿಕಾರಿ ರಾಮಕೃಷ್ಣ, ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಾಜೀವ್ ಸುಲೋಚನ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.