ಸಾರಾಂಶ
-ಹೊಳಲ್ಕೆರೆ ಎಂಎಂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಾಗೃತಿ ಕಾರ್ಯಕ್ರಮ
------ಕನ್ನಡಪ್ರಭ ವಾರ್ತೆ, ಹೊಳಲ್ಕೆರೆ
ಬಾಲಕಿಯರು ಹಾಗೂ ವಿದ್ಯಾರ್ಥಿನಿಯರು ಪರಿಚಿತ ಅಥವಾ ಅಪರಿಚಿತ ವ್ಯಕ್ತಿಗಳ ಅಸುರಕ್ಷಿತ ಸ್ಪರ್ಶದ ಬಗ್ಗೆ ಜಾಗರೂಕರಾಗಿರಬೇಕು ಎಂದು ಮಹಿಳಾ ಸಬಲೀಕರಣ ಘಟಕದ ಡಿ.ಗೀತಾ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.ಹೊಳಲ್ಕೆರೆ ಎಂ.ಎಂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಕಚೇರಿ ಸಹಯೋಗದಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ತಡೆಯವಲ್ಲಿ ಸರ್ಕಾರ ಕಠಿಣ ಕಾನೂನು ಜಾರಿ ಮಾಡಿದೆ. ಫೋಕ್ಸೋ ಕಾಯ್ದೆ ಬಲವಾಗಿದ್ದು, ಆರೋಪಿಗಳು ಕಠಿಣ ಶಿಕ್ಷೆಗೆ ಗುರಿಯಾಗುವರು. ಮಕ್ಕಳ ರಕ್ಷಣೆಗಾಗಿ ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶದ ಕುರಿತು ಪೋಷಕರು ತಿಳಿ ಹೇಳುವುದು ಅಗತ್ಯವಾಗಿದೆ. ಪರಿಚಿತ ಅಥವಾ ಅಪರಿಚಿತರೇ ಆಗಿರಲಿ ಕೆಟ್ಟ ಮನೋಭಾವದಿಂದ ಸ್ಪರ್ಶಿಸಿದರೆ ಮಕ್ಕಳು ಪ್ರತಿರೋಧ ತೋರಿ ಪಾಲಕರಲ್ಲಿ ವಿಷಯ ಹಂಚಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ತಾಯಂದಿರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಡೆಹಿಡಿಯುವಲ್ಲಿ ಕುಟುಂಬ ಪೋಷಕರ ಪಾತ್ರ ಪ್ರಮುಖವಾಗಿದೆ. ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ತಡೆಯಲು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಹಾಗೂ ಮಹಿಳಾ ಸಹಾಯವಾಣಿ ಸಂಖ್ಯೆ 181 ಈ ನಂಬರಿಗೆ ಕರೆ ಮಾಡಬಹುದು. ಕರೆ ಮಾಡಿದವರ ಹೆಸರು ಗೌಪ್ಯವಾಗಿ ಇರಿಸಲಾಗುವುದು. ಸಹಪಾಠಿ ಗೆಳತಿಯರು ಬಾಲ್ಯ ವಿವಾಹಕ್ಕೆ ತುತ್ತಾಗುತ್ತಿದ್ದರೆ ಈ ಸಂಖ್ಯೆಗಳಿಗೆ ಕರೆ ಮಾಡಿ ರಕ್ಷಿಸುವಂತೆ ವಿದ್ಯಾರ್ಥಿಗಳಿಗೆ ಗೀತಾ.ಡಿ ಹೇಳಿದರು. ಕಾಲೇಜಿನ ಪ್ರಾಂಶುಪಾಲ, ಸಹಾಯಕ ಪ್ರಾಧ್ಯಾಪಕರು ಮತ್ತು ಮಹಿಳಾ ಸಾಂತ್ವನ ಕೇಂದ್ರ ಸಿಬ್ಬಂದಿ ಇದ್ದರು.-----------
ಪೋಟೋ-8 ಸಿಟಿಡಿ 6ಹೊಳಲ್ಕೆರೆ ಎಂಎಂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಹಿಳಾ ಸಬಲೀಕರಣ ಘಟಕದ ಡಿ.ಗೀತಾ ಮಾತನಾಡಿದರು.
---------