29ರಂದು ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ

| Published : Jul 27 2024, 12:56 AM IST / Updated: Jul 27 2024, 12:57 AM IST

ಸಾರಾಂಶ

ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024- 2025ನೇ ಸಾಲಿನ ಮುಂಗಾರು ಬೆಳೆಗಳಿಗೆ ನೀರು ಹರಿಸುವ ಬಗ್ಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಜು.29ರಂದು ಶಿವಮೊಗ್ಗದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.

- ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಸಚಿವರು, ಜನಪ್ರತಿನಿಧಿಗಳು, ರೈತರು ಭಾಗಿ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024- 2025ನೇ ಸಾಲಿನ ಮುಂಗಾರು ಬೆಳೆಗಳಿಗೆ ನೀರು ಹರಿಸುವ ಬಗ್ಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಜು.29ರಂದು ಶಿವಮೊಗ್ಗದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.

ಅಂದು ಬೆಳಗ್ಗೆ 11 ಗಂಟೆಗೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ 2023-24ನೇ ಸಾಲಿನ 84ನೇ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ನಡವಳಿಗೆ ಅನುಮೋದನೆ ಪಡೆಯುವುದು, ಭದ್ರಾ ಅಚ್ಚುಕಟ್ಟಿನ 2024- 2025ನೇ ಸಾಲಿನ ಮುಂಗಾರು ಬೆಳೆಗೆ ಪ್ರಸ್ತುತ ಜಲಾಶಯದ ನೀರಿನ ಸ್ಥಿತಿಗತಿ ಪರಿಶೀಲಿಸಿ, ನೀರು ಹರಿಸುವ ಬಗ್ಗೆ, ಅಧ್ಯಕ್ಷರ ಅಪ್ಪಣೆ ಮೇರೆಗೆ ಇತರೆ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ, ಭದ್ರಾ ಕಾಡಾ ಸಮಿತಿ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಟಿ.ಕೆ. ಜಾರ್ಜ್‌, ಜಲ ಸಂಪನ್ಮೂಲ ಸಚಿವರ ಆಪ್ತ ಕಾರ್ಯದರ್ಶಿಗಳು, ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳು, ಯೋಜನೆ ವ್ಯಾಪ್ತಿಯ ನೀರು ಬಳಕೆದಾರ ಸಂಘಗಳು, ಭಾರತೀಯ ರೈತ ಒಕ್ಕೂಟದ ಅಧ್ಯಕ್ಷರು, ಪ್ರತಿನಿಧಿಗಳು, ಅಚ್ಚುಕಟ್ಟು ರೈತರು ಭಾಗವಹಿಸುವರು ಎಂದು ಮಾಹಿತಿ ನೀಡಿದ್ದಾರೆ.