ರಾಜ್ಯ ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದಾಗಿ ಬರಪೀಡಿತ ಜಗಳೂರು ತಾಲೂಕು ಸೇರಿದಂತೆ ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳ ಜೀವನಾಡಿಯಾದ ಭದ್ರಾ ಮೇಲ್ದಂಡೆ ಯೋಜನೆ ಇಂದು ಅತಂತ್ರ ಸ್ಥಿತಿಯಲ್ಲಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಲೇರುದ್ರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಸಿದ್ದರಾಮಯ್ಯ ಸರ್ಕಾರ ನೀರಾವರಿ ಯೋಜನೆ ಕಡೆಗಣಿಸುತ್ತಿದೆ: ಕಲ್ಲೇರುದ್ರೇಶ್ ವಾಗ್ದಾಳಿ - - -
ಕನ್ನಡಪ್ರಭ ವಾರ್ತೆ ಜಗಳೂರುರಾಜ್ಯ ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದಾಗಿ ಬರಪೀಡಿತ ಜಗಳೂರು ತಾಲೂಕು ಸೇರಿದಂತೆ ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳ ಜೀವನಾಡಿಯಾದ ಭದ್ರಾ ಮೇಲ್ದಂಡೆ ಯೋಜನೆ ಇಂದು ಅತಂತ್ರ ಸ್ಥಿತಿಯಲ್ಲಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಲೇರುದ್ರೇಶ್ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ನೀರಾವರಿ ಯೋಜನೆಗಳನ್ನು ಕಡೆಗಣಿಸುತ್ತಿದೆ ಎಂದು ಆರೋಪ ಮಾಡಿದರು.ಬಜೆಟ್ ಅನುದಾನ ಕಡಿತ:
ಕಳೆದ ಮೂರು ವರ್ಷಗಳಲ್ಲಿ ಜಲಸಂಪನ್ಮೂಲ ಇಲಾಖೆಗೆ ನೀಡಲಾಗುತ್ತಿದ್ದ ಅನುದಾನದಲ್ಲಿ ಸುಮಾರು ₹20 ಸಾವಿರ ಕೋಟಿಗಳಷ್ಟು ಕಡಿತವಾಗಿದೆ. ಸಿದ್ದರಾಮಯ್ಯ ಅವಧಿಯಲ್ಲಿ ಅನುದಾನ ಗಣನೀಯವಾಗಿ ಇಳಿಕೆಯಾಗಿದ್ದು, ಇದು ಈ ಭಾಗದ ರೈತರಿಗೆ ಮಾಡಿದ ದ್ರೋಹವಾಗಿದೆ ಎಂದು ಅಂಕಿಅಂಶಗಳ ಸಹಿತ ವಿವರಿಸಿದರು.ಶ್ವೇತಪತ್ರಕ್ಕೆ ಆಗ್ರಹ:
ಎಚ್.ಡಿ. ಕುಮಾರಸ್ವಾಮಿ ಅವಧಿಯಲ್ಲಿ ಆರಂಭವಾದ ಈ ಯೋಜನೆ ಇದುವರೆಗೂ ಎಷ್ಟು ಪ್ರಗತಿ ಕಂಡಿದೆ ಎಂಬ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು. ಜಗಳೂರು ತಾಲೂಕಿನ 9 ಕೆರೆಗಳನ್ನು ತುಂಬಿಸಿ 45 ಸಾವಿರ ಎಕರೆಗೆ ನೀರುಣಿಸುವ ಯೋಜನೆಗೆ ₹1200 ಕೋಟಿ ಮೀಸಲಿಡಲಾಗಿದೆ. ಆದರೆ, ಹಲವೆಡೆ ಪೈಪ್‌ಲೈನ್ ಅಳವಡಿಸಿ ಗುತ್ತಿಗೆದಾರರು ನಾಪತ್ತೆಯಾಗಿದ್ದಾರೆ. ಕಾಮಗಾರಿ ಗುಣಮಟ್ಟದ ಬಗ್ಗೆಯೂ ಅನುಮಾನವಿದೆ ಎಂದರು.ಹೋರಾಟದ ಕರೆ:
ಬೋರ್‌ವೆಲ್‌ಗಳು ಬತ್ತಿ ತೋಟಗಳು ಒಣಗುತ್ತಿದ್ದರೂ ಜನಪ್ರತಿನಿಧಿಗಳು ಮೌನವಾಗಿದ್ದಾರೆ. ಈ ಬೃಹತ್ ಯೋಜನೆ ಯಶಸ್ವಿ ಆಗಬೇಕಾದರೆ ಸಂಘಟಿತ ಹೋರಾಟ ಅನಿವಾರ್ಯ. ಗುತ್ತಿಗೆದಾರರು ಕೇವಲ ಬಿಲ್ ಪಡೆಯಲು ಕಾಮಗಾರಿ ಮಾಡುತ್ತಿದ್ದಾರೆ. ಅಳವಡಿಸಿರುವ ಪೈಪ್‌ಗಳ ಆಯಸ್ಸು ಮುಗಿಯುವ ಮುನ್ನ ನೀರು ಹರಿಯುವುದು ಅನುಮಾನವಾಗಿದೆ ಎಂದರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಉಸ್ಮಾನ್ ಅಲಿ, ಸಣ್ಣ ತಿಪ್ಪಣ್ಣ, ಗೌರಮ್ಮನಹಳ್ಳಿ ಗಿರೀಶ್ ಹಾಗೂ ನಿವೃತ್ತ ಶಿಕ್ಷಕ ಯಲ್ಲಪ್ಪ ಉಪಸ್ಥಿತರಿದ್ದರು.
- - --11ಜೆ.ಜಿ.ಎಲ್.1:
ಜಗಳೂರು ಪಟ್ಟಣದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಲೇರುದ್ರೇಶ್ ಮಾತನಾಡಿದರು.