ಹೊಸಸೇತುವೆ ರಸ್ತೆ, ಸಿದ್ದಾರೂಢನಗರದ ಶ್ರೀ ಬನಶಂಕರಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಬನದ ಹುಣ್ಣಿಮೆ ಉತ್ಸವ ವಿಜೃಂಭಣೆಯಿಂದ ಜರುಗುತ್ತಿದ್ದು, ಸಹಸ್ರಾರು ಭಕ್ತರು ಪಾಲ್ಗೊಂಡರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಹೊಸಸೇತುವೆ ರಸ್ತೆ, ಸಿದ್ದಾರೂಢನಗರದ ಶ್ರೀ ಬನಶಂಕರಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಬನದ ಹುಣ್ಣಿಮೆ ಉತ್ಸವ ವಿಜೃಂಭಣೆಯಿಂದ ಜರುಗುತ್ತಿದ್ದು, ಸಹಸ್ರಾರು ಭಕ್ತರು ಪಾಲ್ಗೊಂಡರು.

ಶುಕ್ರವಾರ ಬೆಳಿಗ್ಗೆ ಧ್ವಜಾರೋಹಣ, ಆಗ್ರೋಧಕ ಸಂಗ್ರಹ(ಗಂಗಾಪೂಜೆ), ಹೊಳೆಸ್ನಾನ, ವಿಶ್ವಕ್ಷ್ಯೇನಾರಾಧನೆ, ಸ್ವಸ್ತಿ ಪುಣ್ಯಾವಾಚನ, ಘಟಸ್ಥಾಪನೆ, ಅಮ್ಮನವರಿಗೆ ಫಲಪಂಚಾಮೃತ ಅಭಿಷೇಕ, ಅಲಂಕಾರ, ಅಷ್ಟವಾಧಾನ ಸೇವೆ ನಂತರ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಡೆಯಿತು.

ಶನಿವಾರ ಬೆಳಿಗ್ಗೆ ಸುಪ್ರಭಾತ ಸೇವೆ, ನಿತ್ಯಪೂಜಾ ವಿಧಿವಿಧಾನ ಆರಂಭವಾಗಿ ಬೆಳಿಗ್ಗೆ ೯ ಗಂಟೆಗೆ ಮಹಾಗಣಪತಿ ಹೋಮ, ನವಗ್ರಹ ಹೋಮ, ಕಳಾಅರ್ಪಣ ಹೋಮ, ಜೀವತತ್ವಾದಿ ಹೋಮ, ದುರ್ಗಾಹೋಮ, ಪೂರ್ಣಾಹುತಿ, ಅಷ್ಠಾವದಾನ ಸೇವೆ, ಮಹಾಮಂಗಳಾರತಿ ನಂತರ ತೀರ್ಥಪ್ರಸಾದ ವಿನಿಯೋಗ ಮತ್ತು ಅನ್ನಸಂತರ್ಪಣೆ ನೆರವೇರಿತು.

ಸಂಜೆ ಅಮ್ಮನವರಿಗೆ ಮಂಗಳ ವಾದ್ಯದೊಂದಿಗೆ ರಾಜಬೀದಿ ಉತ್ಸವ, ದೀಪಾರತಿ, ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನೆರವೇರಿತು.

ಭಾನುವಾರ ಬೆಳಿಗ್ಗೆ ಸುಪ್ರಭಾತ ಸೇವೆ, ನಿತ್ಯಪೂಜಾವಿಧಿ, ಅವಾಂಭೃತ ಸ್ನಾನ(ಓಕಳಿ), ಹೊಳೆಸ್ನಾನ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಭಾರದ್ವಾಜ್ ಮತ್ತು ಸಹಾಯಕ ಅರ್ಚಕ ಹರ್ಷ ಭಾರದ್ವಾಜ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗುತ್ತಿವೆ. ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಎಂ. ಪ್ರಭಾಕರ್, ಕಾರ್ಯದರ್ಶಿ ಬಿ. ಆಂಜನೇಯ, ಖಜಾಂಚಿ ಎಸ್.ಆರ್ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.