ಸಾರಾಂಶ
ಭದ್ರಾವತಿ ನಗರದ ಪೆಟ್ರೋಲ್ ಬಂಕ್‌ವೊಂದರಲ್ಲಿ ಕೆಲಸ ಮಾಡುತ್ತಿರುವ ಶರತ್‌ಕುಮಾರ್‌ಗೆ ಮೈಸೂರಿನಲ್ಲಿ ಬಸ್‌ನಲ್ಲಿ ಪ್ರಯಾಣಿಸುವಾಗ ಶ್ವೇತಾ ಪರಿಚಯ ಮಾಡಿಕೊಂಡಿದ್ದಳು. ಅನಂತರ ವಾಟ್ಸಪ್‌ನಲ್ಲಿ ಬೆತ್ತಲೆಯಾಗಿ ಮಹಿಳೆಯೋರ್ವಳು ವಿಡಿಯೋ ಕಾಲ್ ಮಾಡಿದ್ದಳು. ₹20 ಲಕ್ಷ ನೀಡುವಂತೆ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ. ಈ ಐವರ ತಂಡ ಶರತ್‌ಕುಮಾರ್ ಬಳಿ ₹1 ಲಕ್ಷ ಕಿತ್ತುಕೊಂಡಿದ್ದು ಅಲ್ಲದೇ, ಹಲ್ಲೆ ನಡೆಸಿ ಬಲವಂತವಾಗಿ ಮೈಸೂರಿಗೆ ಕರೆದುಕೊಂಡು ಹೋಗಿ ಒತ್ತಾಯ ಪೂರ್ವಕವಾಗಿ ₹25 ಲಕ್ಷ ಸಾಲ ಪಡೆದುಕೊಂಡಿರುವುದಾಗಿ ಸಹಿ ಹಾಕಿಸಿಕೊಂಡು ಎರಡು ದಿನಗಳ ಕಾಲ ಕೂಡಿ ಹಾಕಿದ್ದರು ಎನ್ನಲಾಗಿದೆ.
ಭದ್ರಾವತಿ: ನಗರದ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಹನಿಟ್ರ್ಯಾಪ್ ಪ್ರಕರಣವೊಂದನ್ನು ಬೇಧಿಸಿ, ಮೈಸೂರಿನಲ್ಲಿ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರು ಮೂಲದ ಶ್ವೇತಾ, ವಿನಾಯಕ, ಮಹೇಶ್, ಅರುಣ್‌ಕುಮಾರ್ ಹಾಗೂ ಹೇಮಂತ್ ಬಂಧಿತರಾಗಿದ್ದು, 1 ಕಾರು ಮತ್ತು 7 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶರತ್‌ಕುಮಾರ ಎಂಬವರ ದೂರು ಆಧರಿಸಿ, ಕಾರ್ಯಾಚರಣೆ ಕೈಗೊಂಡಿದ್ದ ಪೊಲೀಸರು ಐವರನ್ನು ಬಂಧಿಸಿದ್ದಾರೆ.ಘಟನೆ ವಿವರ:
ಭದ್ರಾವತಿ ನಗರದ ಪೆಟ್ರೋಲ್ ಬಂಕ್‌ವೊಂದರಲ್ಲಿ ಕೆಲಸ ಮಾಡುತ್ತಿರುವ ಶರತ್‌ಕುಮಾರ್‌ಗೆ ಮೈಸೂರಿನಲ್ಲಿ ಬಸ್‌ನಲ್ಲಿ ಪ್ರಯಾಣಿಸುವಾಗ ಶ್ವೇತಾ ಪರಿಚಯ ಮಾಡಿಕೊಂಡಿದ್ದಳು. ಅನಂತರ ವಾಟ್ಸಪ್‌ನಲ್ಲಿ ಬೆತ್ತಲೆಯಾಗಿ ಮಹಿಳೆಯೋರ್ವಳು ವಿಡಿಯೋ ಕಾಲ್ ಮಾಡಿದ್ದಳು. ₹20 ಲಕ್ಷ ನೀಡುವಂತೆ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ.ಈ ಐವರ ತಂಡ ಶರತ್‌ಕುಮಾರ್ ಬಳಿ ₹1 ಲಕ್ಷ ಕಿತ್ತುಕೊಂಡಿದ್ದು ಅಲ್ಲದೇ, ಹಲ್ಲೆ ನಡೆಸಿ ಬಲವಂತವಾಗಿ ಮೈಸೂರಿಗೆ ಕರೆದುಕೊಂಡು ಹೋಗಿ ಒತ್ತಾಯ ಪೂರ್ವಕವಾಗಿ ₹25 ಲಕ್ಷ ಸಾಲ ಪಡೆದುಕೊಂಡಿರುವುದಾಗಿ ಸಹಿ ಹಾಕಿಸಿಕೊಂಡು ಎರಡು ದಿನಗಳ ಕಾಲ ಕೂಡಿ ಹಾಕಿದ್ದರು ಎನ್ನಲಾಗಿದೆ.
ಮೈಸೂರಿನಿಂದ ತಪ್ಪಿಸಿಕೊಂಡು ಬಂದ ಶರತ್‌ಕುಮಾರ್ ಅವರು, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ, ಹಣ ವರ್ಗಾವಣೆ ಮಾಹಿತಿ ಕಲೆಹಾಕಿ, ಕಾರ್ಯಾಚರಣೆ ಕೈಗೊಂಡಿದ್ದ ಪೊಲೀಸರು, ಐವರ ತಂಡವನ್ನು ಮೈಸೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.- - -
-ಡಿ21ಬಿಡಿವಿಟಿ2: