ಮುಖ್ಯಮಂತ್ರಿಯನ್ನು ಭೇಟಿಯಾದ ಭಾಗಮಂಡಲ ನಾಡು ಗೌಡ ಸಮಾಜ ನಿಯೋಗ

| Published : Jul 15 2025, 11:45 PM IST

ಮುಖ್ಯಮಂತ್ರಿಯನ್ನು ಭೇಟಿಯಾದ ಭಾಗಮಂಡಲ ನಾಡು ಗೌಡ ಸಮಾಜ ನಿಯೋಗ
Share this Article
  • FB
  • TW
  • Linkdin
  • Email

ಸಾರಾಂಶ

ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ನೇತೃತ್ವದಲ್ಲಿ ಭಾಗಮಂಡಲ ನಾಡು ಗೌಡ ಸಮಾಜದ ಅಧ್ಯಕ್ಷ ಕುದ್ಪಾಜೆ ಪಿ ಪಳಂಗಪ್ಪ ಅವರ ನಿಯೋಗ ಮುಖ್ಯಮಂತ್ರಿಯನ್ನು ಭೇಟಿಯಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಭಾಗಮಂಡಲ ನಾಡು ಗೌಡ ಸಮಾಜದ ಪ್ರಮುಖರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.

ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ನೇತೃತ್ವದಲ್ಲಿ ಭಾಗಮಂಡಲ ನಾಡು ಗೌಡ ಸಮಾಜದ ಅಧ್ಯಕ್ಷ ಕುದ್ಪಾಜೆ ಪಿ ಪಳಂಗಪ್ಪ ಅವರ ನಿಯೋಗ ಮುಖ್ಯಮಂತ್ರಿಯನ್ನು ಭೇಟಿಯಾಯಿತು.

ಮನವಿಯಲ್ಲಿ ಭಾಗಮಂಡಲ ಗ್ರಾಮದಲ್ಲಿ 1983ರಲ್ಲಿ ನಿರ್ಮಿಸಿರುವ ಗೌಡ ಸಮುದಾಯ ಭವನದಲ್ಲಿ ಮೂಲ ಸೌಲಭ್ಯಗಳ ಕೊರತೆ ಇದ್ದು, ಭಾಗಮಂಡಲ ಭಾಗದಲ್ಲಿ ಏಕೈಕ ಸಮುದಾಯ ಭವನ ಇದಾಗಿದೆ. ಗೌಡ ಸಮಾಜ ಮತ್ತು ಎಲ್ಲ ಜಾತಿ-ಧರ್ಮದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂತನವಾಗಿ ಸಮುದಾಯ ಭವನದ ನಿರ್ಮಿಸಲು ಅನುದಾನ ಮಂಜೂರು ಮಾಡಲು ಕೋರಲಾಯಿತು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಅನುದಾನ ಮಂಜೂರು ಮಾಡುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭ ಗೌಡ ಸಮಾಜದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು.

ನಿಯೋಗದಲ್ಲಿ ಗೌಡ ಸಮಾಜದ ಪ್ರಮುಖರಾದ ಹೊಸೂರು ಸತೀಶ್ ಜೋಯಪ್ಪ, ಪ್ರಕಾಶ್ ಕುದ್ಪಾಜೆ, ದೇವಂಗೋಡಿ ಹರ್ಷ, ಕುಯ್ಯಮುಡಿ ರಂಜು, ನಿಡ್ಯಮಲೆ ರವಿ, ಕುದ್ಪಾಜೆ ಗಗನ್, ನಿಡ್ಯಮಲೆ ದಾಮೋದರ, ಅಮೆ ಹರೀಶ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.